ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Published : Jun 29, 2022, 11:30 PM IST
ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

ಸಾರಾಂಶ

*  20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ 3ನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ *  ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಷ್ರತ್‌ ಜಹಾನ್‌  *  ಆರೋಪಿ ವಿರುದ್ಧ ಅಪಹರಣ ಮತ್ತು ಪೋಕ್ಸೋ ಕಾಯ್ದೆಯಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು  

ಬೆಂಗಳೂರು(ಜೂ.29):  ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಠಸಂಭೋಗ ನಡೆಸಿದ ಪ್ರಕರಣದಲ್ಲಿ ನಗರದ ಇಟ್ಟಮಡು ನಿವಾಸಿ ಬಾಬು ಅಲಿಯಾಸ್‌ ಚಿಟ್ಟಿಬಾಬು ಎಂಬಾತನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಅಡಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 3ನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಷ್ರತ್‌ ಜಹಾನ್‌ ಅವರು ಅತ್ಯಾಚಾರ, ಅಪಹರಣ ಮತ್ತು ಅಪ್ರಾಪ್ತೆಯ ಮೇಲ ಲೈಂಗಿಕ ದೌರ್ಜನ್ಯ ಆರೋಪದಡಿ ಬಾಬು ದೋಷಿ ಎಂದು ತೀರ್ಮಾನಿಸಿದರು. ಅತ್ಯಾಚಾರ ಪ್ರಕರಣದಡಿ 10 ವರ್ಷ ಕಠಿಣ ಜೈಲು, ಐದು ಸಾವಿರ ರು. ದಂಡ ಮತ್ತು ಅಪಹರಣ ಆರೋಪದಡಿ ಏಳು ವರ್ಷ ಜೈಲು, ಐದು ಸಾವಿರ ರು. ದಂಡ ವಿಧಿಸಿ ಆದೇಶಿಸಿದರು.ಅಲ್ಲದೆ, ಅಪ್ರಾಪ್ತೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಲೈಂಗಿಕ ಅಪರಾಧ ಕೃತ್ಯಗಳಿಂದ ಮಕ್ಕಳ ರಕ್ಷಣಾ ಕಾಯ್ದೆಯ ಸೆಕ್ಷನ್‌ 5 ಮತ್ತು 6ರ ಅಡಿಯಲ್ಲಿ ಬಾಬುಗೆ 20 ವರ್ಷ ಕಠಿಣ ಜೈಲು ಮತ್ತು ಐದು ಸಾವಿರ ರು. ದಂಡ ವಿಧಿಸಿದರು. ಆರೋಪಿ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕು ಎಂದು ಸ್ಪಷ್ಟಪಡಿಸಿಸಿದ ನ್ಯಾಯಾಧೀಶರು, ಸಂತ್ರಸ್ತೆಗೆ ನಾಲ್ಕು ಲಕ್ಷ ರು. ಪರಿಹಾರವಾಗಿ ನೀಡುವಂತೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ. ಆರೋಪಿಗೆ ವಿಧಿಸಿರುವ ದಂಡದಲ್ಲಿ 10 ಸಾವಿರ ರು. ಸಂತ್ರಸ್ತೆಗೆ ನೀಡಬೇಕು ಎಂದು ಸರ್ಕಾರಕ್ಕೆ ಆದೇಶಿಸಿದೆ.

ತುಮಕೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಪೊಲೀಸಪ್ಪ ಅರೆಸ್ಟ್..!

ಪ್ರಕರಣದ ವಿವರ

ವಿವಾಹಿತನಾದ ಬನಶಂಕರಿಯ ಇಟ್ಟಮಡು ನಿವಾಸಿ ಬಾಬು, 17 ವರ್ಷದ ಬಾಲಕಿಗೆ ಪ್ರೀತಿಸುತ್ತಿರುವುದಾಗಿ ನಾಟಕವಾಡಿದ್ದ. ತನಗೆ ಮದುವೆಯಾಗಿಲ್ಲ ಎಂದು ಹೇಳಿಕೊಂಡಿದ್ದ ಆತ ಪ್ರೀತಿ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯಿಸುತ್ತಿದ್ದ. ಅದಕ್ಕೆ ಆಕೆ ಒಪ್ಪದಿದ್ದಾಗ ಮನೆಯವರನ್ನು ಕೊಲೆ ಮಾಡುವುದಾಗಿ ಬೆದರಿಸಿ, ಬಲವಂತವಾಗಿ ಮನೆಯಿಂದ ಕರೆದೊಯ್ದು ಸುತ್ತಾಡಿಸಿದ್ದ. ಈ ವೇಳೆ ಲೈಂಗಿಕ ಹಿಂಸೆ ನೀಡಿದ್ದ. 2017ರ ಡಿ.23ರಂದು ಸ್ನೇಹಿತರ ಮನೆಗೆ ಕರೆದೊಯಿದ್ದ ಬಾಬು ಮದುವೆಯಾಗಿ ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಠ ಸಂಭೋಗ ಮಾಡಿದ್ದ. ಈ ಕುರಿತು ಜಯನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಅತ್ಯಾಚಾರ, ಅಪಹರಣ ಮತ್ತು ಪೋಕ್ಸೋ ಕಾಯ್ದೆಯಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!