
ಬೆಂಗಳೂರು(ಸೆ.19): ಕಟ್ಟಡವೊಂದರ ಹದಿನಾಲ್ಕನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಹೃತಿಕ್ ಈಶ್ವರ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.
ಹೃತಿಕ್ ಮೂಲತಃ ಬಿಹಾರದವನಾಗಿದ್ದು, ನಗರದಲ್ಲಿ ನೆಲೆಸಿದ್ದ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ. ಹೃತಿಕ್ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇತ್ತೀಚಿಗೆ ಯುವತಿ ಹೃತಿಕ್ನೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದಳು. ಇದರಿಂದ ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.
ಉಯಿಲಮುಡಿ ಕಡಲ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ
ಮಾನ್ಯತಾ ಟೆಕ್ಪಾರ್ಕ್ ಬಳಿ ಬಹುಮಹಡಿ ಕಟ್ಟಡ ನಿರ್ಮಾಣವಾಗುತ್ತಿತ್ತು. ಅದೇ ಕಟ್ಟಡದ 3ನೇ ಮಹಡಿಯಲ್ಲಿ ಹೃತಿಕ್‌ಗೂ ಇತರರು ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ವಿಶ್ರಾಂತಿ ಪಡೆಯುವುದಾಗಿ ಹೇಳಿ ಹೃತಿಕ್ 14ನೇ ಮಹಡಿಗೆ ಹೋಗಿದ್ದ. ಈ ವೇಳೆ ಕಟ್ಟಡದಿಂದ ಜಿಗಿದು ಮೃತಪಟ್ಟಿದ್ದಾನೆ. ಜೋರು ಶಬ್ಧ ಕೇಳಿ ನೆಲ ಮಹಡಿಯಲ್ಲಿ ನೋಡಿದಾಗ ಹೃತಿಕ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಸಂಬಂಧ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಸಂಪಿಗೆಹಳ್ಳಿ ಠಾಣೆ ಪೊಲೀಸರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ