ವಿದ್ಯಾರ್ಥಿನಿಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ತಾಲೂಕು ಪಂಚಾಯಿತಿ ಸದಸ್ಯನ ಪುತ್ರಿ.
ಕಲಬುರಗಿ, (ಜುಲೈ.20): ವಿದ್ಯಾರ್ಥಿನಿಯೋರ್ವಳು ಶಹಾಬಾದ್ ಶಂಕರವಾಡಿ ಬಳಿಯ ಕಾಗಿಣಾ ನದಿಯ ಸೇತುವೆ ಮೇಲೆ ಡಿಯೋ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
Bengaluru Crime News: ಕಾಲೇಜು ಹಾಸ್ಟೆಲಲ್ಲಿ ಇಂಜಿನಿಯರಿಂಗ್ ಸ್ಟುಡೆಂಟ್ ಆತ್ಮಹತ್ಯೆ
ಇಂದು (ಬುಧವಾರ) ಮನೆಯಿಂದ ತನ್ನ ಡಿಯೋ ವಾಹನದಲ್ಲಿ ಹೋಗಿದ್ದ ಭಾಗ್ಯಶ್ರೀ, ಶಹಾಬಾದ್ ಶಂಕರವಾಡಿ ಬಳಿಯ ಕಾಗಿಣಾ ನದಿಯ ಸೇತುವೆ ಮೇಲೇ ವಾಹನ ನಿಲ್ಲಿಸಿದ್ದಾಳೆ. ಬಳಿಕ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಪತ್ತೆ ಮಾಡಿ ತೆಗೆದಿದ್ದಾರೆ. ಈ ಬಗ್ಗೆ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆ ಬಳಿಕ ಭಾಗ್ಯಶ್ರೀ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.
ಸೇತುವೆ ಮೇಲಿಂದ ನದಿಗೆ ಹಾರಿದ ಯುವಕ
ಗದಗ, (ಜುಲೈ.20) : ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಸೇತುವೆ ಮೇಲಿಂದ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ಇಂದು(ಬುಧವಾರ) ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದೆ.
ಮುಂಡರಗಿ ಪಟ್ಟಣದ ಗೊಂದಳಿ ಓಣಿಯ ವಿಶ್ವನಾಥ್ ಗಣಾಚಾರಿ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೂ ಮುಂಚೆ ಸೆಲ್ಫಿ ವಿಡಿಯೋ ಮಾಡಿರೋ ವಿಶ್ವ ಆತ್ಮಹತ್ಯೆಗೆ ಕಾರಣವನ್ನ ಸ್ಪಷ್ಟವಾಗಿ ತಿಳಿಸಿಲ್ಲ.
1 ನಿಮಿಷ 55 ಸೆಕೆಂಡ್ ನ ಸೆಲ್ಫಿ ವಿಡಿಯೋದಲ್ಲಿ ನಾಗರಾಜ್ ಬೀಸೆ ಅನ್ನೋರ ಹೆಸರು ಪ್ರಸ್ತಾಪ ಮಾಡಿ, ನೀವು ಅನ್ಯಾಯ ಮಾಡಿದ್ದೀರಿ.. ನೀವು ಮಾಡಿದ ದ್ರೋಹ ಮರೆಯಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ನನಗೆ ಈಜು ಬರುತ್ತೆ.. ಈಜುತ್ತೇನೆ.. ಇಲ್ಲ ನಕ್ಷತ್ರ ಮುಟ್ಟುತ್ತೇನೆ ಅಂತಾ ರೆಕಾರ್ಡ್ ಮಾಡಿಟ್ಟು ನದಿಗೆ ಹಾರಿದ್ದಾನೆ.
ಕಾಲೇಜು ಹಾಸ್ಟೆಲಲ್ಲಿ ಇಂಜಿನಿಯರಿಂಗ್ ಸ್ಟುಡೆಂಟ್ ಆತ್ಮಹತ್ಯೆ
ಬೆಂಗಳೂರು (ಜು. 20): ಬೆಂಗಳೂರಿನ ಕೆಂಗೇರಿಯ ಜೆಎಸ್ಎಸ್ ಕಾಲೇಜು ವಿಧ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 21 ವರ್ಷದ ಯುವತಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಶಿವಾನಿ (21) ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿನಿ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜೆಎಸ್‌ಎಸ್ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಹಾಸ್ಟೆಲಿನಲ್ಲಿ ಘಟನೆ ನಡೆದಿದೆ.
ಇಂದು ಪರೀಕ್ಷೆಗೆ ಹಾಜರಾಗದೆ ಹಾಸ್ಟೆಲಿನ ಕೋಣೆಯಲ್ಲಿನ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಾಹ್ನ ಹಾಸ್ಟಲ್ ವಾರ್ಡನ್ ಹೋಗಿ ನೋಡಿಗಾದ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವಾರ್ಡನ್ ಕೂಡಲೇ ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.