
ಮಂಡ್ಯ(ಡಿ.29): ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ.
ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿದೆ. ಸ್ಫೋಟದ ತೀವ್ರತೆಗೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಆನ್‌ಲೈನ್ ಗೇಮ್ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು
ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ