ಪುಣೆ: ಹಸುವಿನಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆಯ ಲೋನಾವಾಲಾದಲ್ಲಿ ಈ ಘಟನೆ ನಡೆದಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಅಡಿ (ಯಾವುದೇ ಪುರುಷ, ಮಹಿಳೆ ಅಥವಾ ಪ್ರಾಣಿಯೊಂದಿಗೆ ಪ್ರಕೃತಿಯ ಕ್ರಮಕ್ಕೆ ವಿರುದ್ಧವಾಗಿ ದೈಹಿಕ ಸಂಭೋಗವನ್ನು ನಡೆಸುವುದು) ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲೋನಾವಾಲಾ (Lonawala) ಕುಸ್ಗಾನ್‌ನಲ್ಲಿ (Kusgaon) ಈತ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯೂ ಹಸುವಿನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದ್ದನ್ನು ಗಮನಿಸಿದ ನೆರೆಹೊರೆಯ ಜನ ಮಾಲೀಕರಿಗೆ ವಿಷಯ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು 22 ವರ್ಷ ಪ್ರಾಯದ ದೀಪಕ್ ಶಿವಾಜಿ ರಾಜವಾಡೆ (Deepak Shivaji Rajiwade) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಹಸುವಿನ ಮಾಲೀಕರು ದೂರು ದಾಖಲಿಸಿದ್ದು ಆರೋಪಿ ದೀಪಕ್ ಶಿವಾಜಿ ರಾಜೀವಾಡೆಯನ್ನು ಪೊಲೀಸರು ಬಂಧಿಸಿದ್ದಾರೆ.
Mangaluru: ಡ್ರಗ್ಸ್ ನೀಡಿ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು
ಆರೋಪಿಯ ನೆರೆಹೊರೆಯವರು ಹಸುವಿನ ಜೊತೆ ಆಕ್ಷೇಪಾರ್ಹ ಸ್ಥಾನದಲ್ಲಿದ್ದುದನ್ನು ಕಂಡು ಘಟನೆ ಬೆಳಕಿಗೆ ಬಂದಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಅಡಿ ಯಾವುದೇ ಪುರುಷ, ಮಹಿಳೆ ಅಥವಾ ಪ್ರಾಣಿಯೊಂದಿಗೆ ಪ್ರಕೃತಿಯ ಕ್ರಮಕ್ಕೆ ವಿರುದ್ಧವಾಗಿ ದೈಹಿಕ ಸಂಭೋಗವನ್ನು ಹೊಂದಿರುವ ಪ್ರಕರಣದಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈಗ ಹಸುವಿನ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ.
ಏಪ್ರಿಲ್‌ನಲ್ಲಿ ಇದೇ ರೀತಿಯ ಘಟನೆ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ (Lucknow) ನಡೆದಿತ್ತು. ಹಸುವಿನ ಜೊತೆ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಅಕ್ಕಪಕ್ಕದವರೊಬ್ಬರು ಆರೋಪಿ ಮಜೀದ್ ಹಸುವಿನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದರು. ಒಬ್ಬ ವ್ಯಕ್ತಿ ತನ್ನ ಹಸುವಿನ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೂರುದಾರ ಜಿತೇಂದ್ರ ಯಾದವ್ ಆರೋಪಿಸಿ ದೂರು ನೀಡಿದ್ದರು.
ಅಯ್ಯೋ ವಿಧಿಯೇ... ಜನ್ಮದಾತನ ಬಳಿಯೂ ಹೆಣ್ಣು ಸುರಕ್ಷಿತಳಲ್ಲ: ಪೊಲೀಸರಿಂದ ತಂದೆಯ ಬಂಧನ
ಸರೋಜನಿ ನಗರ (Sarojni Nagar) ಠಾಣಾಧಿಕಾರಿ ಸಂತೋಷ್ ಕುಮಾರ್ ಆರ್ಯ (Santosh Kumar Arya) ಮಾತನಾಡಿ ಆರೋಪಿಯ ನೆರೆಹೊರೆಯವರು ಆತನ ಕೃತ್ಯವನ್ನು ಸಿಸಿಟಿವಿಯಲ್ಲಿ ಗಮನಿಸಿ ಬಳಿಕ ಮಾಲೀಕರಿಗೆ ದೂರು ನೀಡಿದ್ದರು. ಅಲ್ಲದೇ ಘಟನೆಯಿಂದ ಕೋಪಗೊಂಡ ಸ್ಥಳೀಯ ಜನರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಲಕ್ನೋದ ಸರೋಜನಿ ನಗರದ ದರೋಗಾ ಖೇರಾದಲ್ಲಿ (Daroga Khera) ಆತನನ್ನು ಬಂಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ