ಆನೇಕಲ್‌ನಲ್ಲಿ 22 ವರ್ಷದ ವಿಲೇಜ್‌ ಅಕೌಂಟೆಂಟ್‌ ನೇಣಿಗೆ ಶರಣು: ಯುವತಿ ಸಾವಿನ ಸುತ್ತ ಅನುಮಾನ

By Sathish Kumar KH  |  First Published Mar 26, 2023, 11:10 PM IST

ಸರ್ಜಾಪುರ ನಾಡ ಕಚೇರಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಮನೆಯಲ್ಲಿ ಒಬ್ಬಳೇ ಇರುವಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


ಆನೇಕಲ್ (ಮಾ.26): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರ ನಾಡ ಕಚೇರಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಮನೆಯಲ್ಲಿ ಒಬ್ಬಳೇ ಇರುವಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲಿಯಾ ಅಂಜುಂ ಅಣ್ಣಿಗೇರಿ (22) ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಮೂಲದ ಯುವತಿ, ಸರ್ಜಾಪುರ ನಾಡ ಕಚೇರಿಯಲ್ಲಿ ವಿಲೇಜ್ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಇನ್ನು ಇವರು ಆನೇಕಲ್ ಪಟ್ಟಣದ ಪೊಲೀಸ್ ಠಾಣೆ ಸಮೀಪದ ಮುನಿವೀರಪ್ಪ ಗಲ್ಲಿಯಲ್ಲಿ ಶ್ರೀನಿವಾಸ್ ರೆಡ್ಡಿ ಎಂಬುವವರ ಕಟ್ಟಡದಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದರು. ಇನ್ನು ತಂದೆ- ತಾಯಿ ಊರಿನಲ್ಲಿ ವಾಸವಾಗಿದ್ದಾರೆ. ಅಣ್ಣ ಹಾಗೂ ತಂಗಿ ಇಬ್ಬರೇ ಬೆಂಗಳೂರಿನಲ್ಲಿ ಮನೆ ಮಾಡಿಕೊಂಡು ವಾಸವಿದ್ದರು.

Tap to resize

Latest Videos

Breaking: ಇಳಕಲ್‌ಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: 20 ಪ್ರಯಾಣಿಕರಿಗೆ ಗಾಯ

ಅಣ್ಣ ಊರಿಗೆ ಹೋದಾಗ ನೇಣಿಗೆ ಶರಣು: ಸರ್ಜಾಪುರದಲ್ಲಿ ತಂಗಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಹಿನ್ನೆಲೆಯಲ್ಲಿ ಆಕೆಯ ಮದುವೆ ಆಗುವವರೆಗೂ ಜೊತೆಯಲ್ಲಿರುವ ಉದ್ದೇಶದಿಂದ ಅಣ್ಣನೂ ಕೂಡ ತಂಗಿಯೊಂದಿಗೆ ಬಂದು ಆನೇಕಲ್ ಪಟ್ಟಣದಲ್ಲಿ ಪ್ರತ್ಯೇಕವಾಗಿ ಮನೆ ಮಾಡಕೊಂಡು ವಾಸವಾಗಿದ್ದರು. ಆದರೆ, ಯಾವುದೇ ಕಾರ್ಯ ನಿಮಿತ್ತ ಅಲಿಯಾ ಅಂಜುಂ ಅವರ ಅಣ್ಣ, ಬಳ್ಳಾರಿಯ ಗ್ರಾಮಕ್ಕೆ ಹೋಗಿದ್ದನು. ಇಂದು ಭಾನುವಾರ ರಜಾ ದಿನವಾದ್ದರಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಒಬ್ಬಳೇ ಇರುವಾಗ ಫ್ಯಾನಿಗೆ ಸೀರೆಯನ್ನು ಬಿಗಿದು ನೇಣಿಗೆ ಶರಣಾಗಿದ್ದಾಳೆ.

ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ: ಈ ಘಟನೆ ಕುರಿತು ಕಟ್ಟಡದ ಮಾಲೀಕರು ಆನೇಕಲ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯ ಮೃತದೇಹ ಮತ್ತು ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಆದರೆ, ಯುವತಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ತಿಳಿದುಬಂದಿಲ್ಲ. ಇನ್ನು ಅಣ್ಣನೂ ಕೂಡ ಊರಿಗೆ ಹೋಗದ್ದು, ಮನೆಯವರಿಗೆ ವಿಚಾರ ತಿಳಿಸಲಾಗಿದೆ. ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ಕಾರಣ ತಿಳಿದುಬರಲಿದೆ. ಜೊತೆಗೆ, ಪೊಲೀಸರು ಕೂಡ ಸಾವಿಗೆ ಕಾರಣವನ್ನು ಹುಡುಕುತ್ತಿದ್ದಾರೆ. 

ವಿಜಯಪುರ (ಮಾ.26): ವಿಜಯಪುರದ ಚಡಚಣದಿಂದ ಇಳಕಲ್‌ಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಳಿಯ ತಗ್ಗು ಪ್ರದೇಶಕ್ಕೆ ಉರುಳಿಬಿದ್ದಿದೆ. ಈ ಘಟನೆಯಿಂದ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ, ವಿಜಯಪುರ ತಾಲ್ಲೂಕಿನ ತಿಡಗುಂದಿ ಬಳಿ ಮಧ್ಯಾಹ್ನ ನಡೆದಿದೆ. ಈ ಘಟನೆಯಿಂದ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅದರಲ್ಲೂ ಬಸ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಆದರೆ, ಬಸ್‌ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಆಗಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ ಚಡಚಣದಿಂದ ಇಳಕಲ್‌ಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ.

ಕೊಪ್ಪಳದಲ್ಲಿ ಶುರುವಾಯಿತು ಮಾಟಮಂತ್ರ: ಸಚಿವ ಹಾಲಪ್ಪ ಆಚಾರ ಸೋಲಿಗೆ ವಿರೋಧಿಗಳಿಂದ 10 ವಾಮಾಚಾರ!

ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು: ಇನ್ನು ಘಟನೆ ನಡೆದ ಕೂಡಲೇ ದಾರಿ ಇತರೆ ವಾಹನಗಳ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ, ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಬಸ್‌ ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ. ಮತ್ತೊಂದೆಡೆ ಆಂಬುಲೆನ್ಸ್‌ಗೆ ಕರೆ ಮಾಡಿದ್ದು, ಸ್ವಲ್ಪ ಸಮಯದಲ್ಲೇ ಬಂದ ಆಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ನೆರವಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

click me!