
ಬೆಂಗಳೂರು(ಅ.14): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾನೂನು ಬಾಹಿರವಾಗಿ ಸಾಗಾಣಿಕೆಯಾಗುತ್ತಿದ್ದ 23 ಲಕ್ಷ ಮೌಲ್ಯದ ವಿದೇಶಿ ಸಿಗರೆಟ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.
ಶಾರ್ಜಾದಿಂದ ಆಗಮಿಸಿದ ಎಕ್ಸ್ ರೇ ಯಂತ್ರಗಳಲ್ಲಿ ಅಡಗಿಸಿಟ್ಟು ಸಿಗರೆಟ್ ಸಾಗಾಟಕ್ಕೆ ಕೆಲವರು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಎಕ್ಸ್ ರೇ ಯಂತ್ರಗಳನ್ನು ಪರಿಶೀಲಿಸಿದಾಗ ಸಿಗರೆಟ್ ಪತ್ತೆಯಾಗಿದೆ. ಇವುಗಳು ಯಾರಿಗೆ ತಲುಪಬೇಕಿತ್ತು ಎಂಬುದು ಖಚಿತವಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ನಡೆದಿದೆ ಎಂದು ಕಸ್ಟಮ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರ ಸೋಗಲ್ಲಿ ಕಳ್ಳತನ: 10 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಡನ್ ಹಿಲ್ ಮತ್ತು ಬೆನ್ಸನ್ ಮತ್ತು ಹೆಡ್ಜಸ್ ಕಂಪನಿಯ ಸಿಗರೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಎಕ್ಸ್ ರೇ ಸ್ಕ್ಯಾನಿಂಗ್‌ನ ಯಂತ್ರಗಳೆಂದು ಹೇಳಿ ಎಂಟು ಪೆಟ್ಟಿಗೆಗಳಲ್ಲಿ ತುಂಬಲಾಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ