ಬೆಂಗಳೂರು: ಮನೆ ಬಿಟ್ಟು ಓಡಿ ಬಂದು ಮದುವೆಯಾಗಿದ್ದ ಯುವತಿ ಆತ್ಮಹತ್ಯೆ, ಕಾರಣ ನಿಗೂಢ?

Published : Dec 04, 2023, 04:17 AM IST
ಬೆಂಗಳೂರು: ಮನೆ ಬಿಟ್ಟು ಓಡಿ ಬಂದು ಮದುವೆಯಾಗಿದ್ದ ಯುವತಿ ಆತ್ಮಹತ್ಯೆ, ಕಾರಣ ನಿಗೂಢ?

ಸಾರಾಂಶ

ಅನುಷಾ ಮೃತ ದುರ್ದೈವಿ. ಶನಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಅಳಿಯ ಪ್ರವೀಣ್‌, ಆತನ ತಾಯಿ ನಾಗಮ್ಮ, ಸೋದರ ಮಾವ ರಾಜೇಶ್‌, ದೊಡ್ಡಪ್ಪ ತಿಮ್ಮೇಗೌಡ ಹಾಗೂ ಇವರ ಮಗ ಮಹೇಶ್‌ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲು 

ಬೆಂಗಳೂರು(ಡಿ.04): ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹದೇವಪುರದ ಸಿಂಗಯ್ಯನಪಾಳ್ಯ ನಿವಾಸಿ ಅನುಷಾ(23) ಮೃತ ದುರ್ದೈವಿ. ಶನಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಅಳಿಯ ಪ್ರವೀಣ್‌, ಆತನ ತಾಯಿ ನಾಗಮ್ಮ, ಸೋದರ ಮಾವ ರಾಜೇಶ್‌, ದೊಡ್ಡಪ್ಪ ತಿಮ್ಮೇಗೌಡ ಹಾಗೂ ಇವರ ಮಗ ಮಹೇಶ್‌ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ ಮತ್ತು ಪಕ್ಕದ ಊರಿನ ಪ್ರವೀಣ್‌ ಪರಸ್ಪರ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಅನುಷಾ ಮನೆಯವರ ವಿರೋಧವಿತ್ತು. ಎರಡು ತಿಂಗಳ ಹಿಂದೆ ಅನುಷಾ ಮತ್ತು ಪ್ರವೀಣ್‌ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಬಳಿಕ ಮಹದೇವಪುರದ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು.

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಮಧ್ಯೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಆತ್ಮಹತ್ಯೆ

ಪ್ರವೀಣ್‌ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಾನೆ. ಅನುಷಾ ಮನೆಯಲ್ಲೇ ಇದ್ದಳು. ಶನಿವಾರ ಸಂಜೆ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಅನುಷಾ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅತ್ತೆ ನಾಗಮ್ಮ ರೂಮ್‌ಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರ ಸಿಕ್ಕಿಲ್ಲ. ಆದರೆ, ಮೃತರ ಪೋಷಕರು, ಅಳಿಯ ಪ್ರವೀಣ್‌ ಮತ್ತು ಅವರ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!