ಶ್ರೀನಗರದ ನಿವಾಸಿ ಯೋಗೇಶ್ ಕುಮಾರ್ ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಸ್ಥಳೀಯ ಕೆಲವು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುನೇಶ್ವರ ಬ್ಲಾಕ್‌ನಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಶುಕ್ರವಾರ ರಾತ್ರಿ 1.30ರಲ್ಲಿ ದೇವರ ಉತ್ಸವದ ವೇಳೆ ನಡೆದ ಗಲಾಟೆ
ಬೆಂಗಳೂರು(ಮಾ.10): ಶಿವರಾತ್ರಿ ಉತ್ಸವದ ವೇಳೆ ತಮಟೆ ಶಬ್ದಕ್ಕೆ ನೃತ್ಯ ಮಾಡುವ ವಿಚಾರವಾಗಿ ಯುವಕರ ಮಧ್ಯೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀನಗರದ ನಿವಾಸಿ ಯೋಗೇಶ್ ಕುಮಾರ್ (23) ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಸ್ಥಳೀಯ ಕೆಲವು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುನೇಶ್ವರ ಬ್ಲಾಕ್‌ನಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಶುಕ್ರವಾರ ರಾತ್ರಿ 1.30ರಲ್ಲಿ ದೇವರ ಉತ್ಸವದ ವೇಳೆ ಈ ಗಲಾಟೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಫ್ಲೆಕ್ಸ್ ವಿಚಾರಕ್ಕೆ ಗಲಾಟೆ, ಮೈಸೂರಿನಲ್ಲಿ ಮುಸ್ಲಿಂ ಧರ್ಮಗುರು ಬರ್ಬರ ಹತ್ಯೆ!
ಮೃತ ಯೋಗೇಶ್ ಮಂಡ್ಯ ಜಿಲ್ಲೆ ಕೊಪ್ಪದವನಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ವಾಹನ ಸರ್ವೀಸ್ ಸೆಂಟರ್‌ನಲ್ಲಿ ಕೆಲಸ ಮಾಡಿಕೊಂಡು ಶ್ರೀನಗರದಲ್ಲಿ ನೆಲೆಸಿದ್ದ. ಶಿವರಾತ್ರಿ ಹಬ್ಬದ ನಿಮಿತ್ತ ಮುನೇಶ್ವರ ಬ್ಲಾಕ್‌ನಲ್ಲಿದ್ದ ದೇವಾಲಯಕ್ಕೆ ರಾತ್ರಿ ಆತ ಬಂದಿದ್ದ. ಆ ವೇಳೆ ಉತ್ಸವದಲ್ಲಿ ತಮಟೆ ಶಬ್ದಕ್ಕೆ ಕುಣಿಯುವಾಗ ಯುವಕರಿಗೆ ಮೈ ಮುಟ್ಟಿದ ಕಾರಣಕ್ಕೆ ಜಗಳವಾಗಿದೆ. ಬಳಿಕ ಕೆರಳಿದ ಕೆಲವರು, ಯೋಗೇಶ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.