ಭಾರೀ ಮಳೆಯಿಂದಾಗಿ ಮೊದಲೇ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ಆತ್ಮಹತ್ಯಗೆ ಯತ್ನಿಸಿದ್ದಾಳೆ.
ಮಂಡ್ಯ, (ಆ.08): ತುಂಬಿ ಹರಿಯುತ್ತಿರೋ ಕಾವೇರಿ ನದಿಗೆ ಹಾರಿ ತಾಯಿ, ಮಗ ಆತ್ಮಹತ್ಯಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನಡೆದಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರದ ಮಹಿಳೆ ಅಪೂರ್ವ(24 ) ತನ್ನ ಎರಡೂವರೆ ವರ್ಷದ ಪುತ್ರಿ ಕೀರ್ತನಾ ಜತೆಗೆ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ನದಿಗೆ ಹಾರಿದ್ದಾಳೆ.
ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!
ಇದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಅಪೂರ್ವಳನ್ನ ರಕ್ಷಣೆ ಮಾಡಿದ್ದಾರೆ. ಸುಮಾರು 2 ಕಿ.ಮೀ ದೂರ ನದಿಯಲ್ಲಿ ಕೊಚ್ಚಿ ಹೋಗಿದ್ದ ಅಪೂರ್ವಳನ್ನ ಗಂಜಾಮ್ ಕರಿಘಟ್ಟ ಸೇತುವೆ ಬಳಿ ಹಗ್ಗ ಹಾಕಿ ರಕ್ಷಣೆ ಮಾಡಿದ್ದಾರೆ.
ಆದ್ರೆ, ಮಗು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೊಚ್ಚಿ ಹೋದ ಮಗುವಿನ ಶವಕ್ಕಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಈ ಬಗ್ಗೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ.