ಹತ್ಯೆ ಬಳಿಕ ಕೊಲೆಗಡುಕರು ಒಂದೊಂದು ದಿಕ್ಕಿಗೆ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿಯನ್ನ ಸಂಗ್ರಹಿಸಿದ್ದಾರೆ.
ಬೆಳಗಾವಿ(ಆ.31): ಕಲ್ಲಿನಿಂದ ಜಜ್ಜಿ ನಡು ಬೀದಿಯಲ್ಲೇ ಯುವಕನನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಿನ್ನೆ(ಬುಧಾವರ) ತಡರಾತ್ರಿ ನಡೆದಿದೆ. ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ದುರ್ದೈವಿಯಾಗಿದ್ದಾನೆ.
ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಮೂರು ಜನ ಯುವಕರು ನಾಗರಾಜ್‌ನನ್ನ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹತ್ಯೆ ಬಳಿಕ ಕೊಲೆಗಡುಕರು ಒಂದೊಂದು ದಿಕ್ಕಿಗೆ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿಯನ್ನ ಸಂಗ್ರಹಿಸಿದ್ದಾರೆ.
ತುಮಕೂರು: ಪತ್ನಿಯ ಅಂತ್ಯಸಂಸ್ಕಾರಕ್ಕೆ ಬಾರದ ಗಂಡ; ಮನೆ ಮುಂದೆ ಶವ ಬಿಟ್ಟು ಹೋದ ಗ್ರಾಮಸ್ಥರು!
ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನ ಶಿಫ್ಟ್ ಮಾಡಲಾಗಿದೆ.