
ಕಲಬುರಗಿ(ಮೇ.11): ಪ್ರಿಯಕರ ಕೈಕೊಟ್ಟ ಹಿನ್ನಲೆಯಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.
ಡೆತ್ ನೋಟ್ ಬರೆದಿಟ್ಟು ಪುಷ್ಪಾ ನೇಣಿಗೆ ಕೊರಳೊಡ್ಡಿದ್ದಾಳೆ. ಯುವತಿ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದಳು. ಮೃತ ಪುಷ್ಪಾ UPSC ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು.
ದಾಬಸ್‌ಪೇಟೆ: ಫೋನ್ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ
ಪುಷ್ಪಾ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪ್ರೀತಿ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಪುಷ್ಪಾ ಮದ್ವೆ ಮಾಡಿಕೋ ಎಂದು ಕಿರಣ್‌ಗೆ ಒತ್ತಾಯ ಮಾಡುತ್ತಿದ್ದಳು.
ಮನೆಯವರ ಒತ್ತಡದಿಂದ ಕಿರಣ್ ಮದುವೆ ನಿರಾಕರಿಸಿದ್ದಲ್ಲದೇ ಪುಷ್ಪಾಳನ್ನು ಇಗ್ನೋರ್ ಮಾಡುತ್ತಿದ್ದ. ಇದರಿಂದ ಮನನೊಂದು ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ