
ಹೊಸಕೋಟೆ(ಜೂ.16): ರಸ್ತೆಯಲ್ಲಿ ಅಡ್ಡಾದ್ದಿಡ್ಡಿಯಾಗಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನ ಬರ್ಬರ ಹತ್ಯೆಗೈದ ಘಟನೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬದ ಬಳಿ ಇಂದು(ಭಾನುವಾರ) ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ಗ್ರಾಮದ ನಿವಾಸಿ ನವೀನ್ ನಾಯಕ್(27) ಕೊಲೆಯಾದ ಯುವಕ.
ಇಂದು ಬೆಳಗಿನ ಜಾವ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದನ್ನು ನವೀನ್ ನಾಯಕ್ ಪ್ರಶ್ನೆ ಮಾಡಿದ್ದನಂತೆ. ಇದೇ ವಿಚಾರಕ್ಕೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಮರ್ಡರ್ ಕೇಸಲ್ಲಿ ಅರೆಸ್ಟ್: ದರ್ಶನ್‌ಗೆ ಬಿಟ್ಟೂ ಬಿಡದೆ ಬೆನ್ನು ಹತ್ತಿದೆಯಾ 'ಡೆವಿಲ್' ಚಿತ್ರ?
ನವೀನ್ ಇಂದು ತರಕಾರಿ ವ್ಯಾಪಾರಕ್ಕೆ ಹೋಗುತ್ತಿದ್ದನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓವರ್ ಟೆಕ್ ಮಾಡುವ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಹೇಳಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಕೊಲೆಗಾರರನ್ನ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ