
ತೆಲಂಗಾಣ (ಸೆ.17): ಕರ್ನಾಟಕದ ಯುವತಿಯೊಬ್ಬಳನ್ನು ವಂಚಿಸಿ, ಆಕೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 28 ವರ್ಷದ ಹೈದರಾಬಾದ್ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಲ್ವಾಲ್ ನಿವಾಸಿ ಮಹೇಂದ್ರ ಚಾರಿ ಎಂದು ಗುರುತಿಸಲಾಗಿದೆ. ಕರ್ನಾಟಕ ಮೂಲದ 22 ವರ್ಷದ ಸಂತ್ರಸ್ತೆ ಯುವತಿ ಎರಡು ತಿಂಗಳ ಹಿಂದೆ ಹೈದರಾಬಾದ್‌ಗೆ ಬಂದು ಮೇಡ್ಚಲ್‌ನ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಯುವತಿ ಮತ್ತು ಯುವಕನಿಗೆ ಪರಿಚಯವಾಯ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ ಮೊದಲ ಜಂಟಿ ರ್‍ಯಾಲಿ ದಿಢೀರ್ ರದ್ದು, ಬಿಜೆಪಿ ವ್ಯಂಗ್ಯ
ಶುಕ್ರವಾರ ರಾತ್ರಿ ಬಂಧಿಸಲಾದ ಮಹೇಂದ್ರ, ಎರಡು ತಿಂಗಳ ಹಿಂದೆ ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಮದುವೆಯಾಗುವುದಾಗಿ ಭರವಸೆ ನೀಡಿ ವಂಚಿಸಿ ಅತ್ಯಾಚಾರವೆಸಗಿ, ಕಳೆದ ವಾರ ಬೇರೊಬ್ಬ ಯುವತಿಯನ್ನು ಮದುವೆಯಾಗಿದ್ದ ಎಂಬ ದೂರಿನ ಆಧಾರದ ಮೇಲೆ ಬೋವನಪಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ ಎಂದು ಬೋವನಪಲ್ಲಿ ಸಬ್ ಇನ್ಸ್‌ಪೆಕ್ಟರ್ ನಾಗೇಂದ್ರ ಬಾಬು ಮಾಹಿತಿ ನೀಡಿದ್ದಾರೆ.
ಬ್ರೇಕಪ್ಗೆ ಒಪ್ಪದಿದ್ದಕ್ಕೆ ಪ್ರಿಯಕರನ ಹತ್ಯೆ: ವಿಷ ನೀಡಿದ್ದ ಗ್ರೀಷ್ಮಾ ಕಾಟಕ್ಕೆ ಬೇಸತ್ತ
ಆರೋಪಿ ವಿರುದ್ಧ ಎಸ್‌ಸಿ ಮತ್ತು ಎಸ್‌ಟಿ ಅಟ್ರಾಸಿಟಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ