28 ವರ್ಷದ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ರಮೇಶ್ ಜಾರಕಿಹೊಳಿ ಆಪ್ತನ ಹೆಸ್ರು!

By Suvarna News  |  First Published Sep 4, 2022, 10:35 AM IST

ರಮೇಶ ಜಾರಕಿಹೊಳಿ ಆಪ್ತ ಹಾಗೂ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯನ ಹೆಸರು ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ಬೆಳಗಾವಿ, (ಸೆಪ್ಟೆಂಬರ್.04): ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪೊಲೀಸರ ಹೆಸರು ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ನಡೆದಿದೆ.

28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೂ ಮುನ್ನ ಸಾವಿಯೋ ಪಿಳೈ ಡೆತ್‌ ನೋಟ್ ಬರೆದಿಟ್ಟಿದ್ದು, ಕ್ಯಾಂಪ್ ಠಾಣೆಯ ಪಿಎಸ್ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾನೆ ಎಂದು ತಿಳಿದುಬಂದಿದೆ.

Tap to resize

Latest Videos

ಒಂದೇ ಕುಟುಂಬದ ಮೂವರ ಸಾವು ಪ್ರಕರಣ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ

ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ. ಆದ್ರೆ, ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಕ್ಯಾಂಪ್ ಪಿಎಸ್‌ಐ ಸೇರಿ 1.50 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.  1.50 ಲಕ್ಷ ಹಣ ಪಡೆದಿದ್ದಲ್ಲೇ  ಇನ್ನು ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ಸಾವಿಯೋ ನೇಣು ಬಿಗಿದುಕೊಂಡು  ಪಿಳೈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

click me!