
ಮಂಡ್ಯ(ಜ.23): ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಿನ್ನೆ(ಸೋಮವಾರ) ಸಂಜೆ ನಡೆದಿದೆ. ದೀಪಿಕಾ(28) ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ ದುಷ್ಕರ್ಮಿಗಳು.
ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್‌ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾಲೆಗೆ ಹೋಗಿ ಆನಂತರ ದೀಪಿಕಾ ನಾಪತ್ತೆಯಾಗಿದ್ದಳು. ಜನವರಿ 20ರ ಮಧ್ಯಾಹ್ನನಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಸಂಜೆ ದೀಪಿಕಾ ಶವ ಪತ್ತೆಯಾಗಿದೆ.
ಸಾಲ ವಾಪಸ್ ಕೇಳಲು ಹೋದವನಿಗೆ ಮಚ್ಚಿನೇಟು..! ಅವನನ್ನ ಮುಗಿಸಲು ಆಕೆ ಮಾಡಿದ ಪ್ಲ್ಯಾನ್ ಏನ್ ಗೊತ್ತಾ ?
ಮೇಲೆಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿದೆ. ಮಹಿಳೆ ನಾಪತ್ತೆ, ಕೊಲೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಶಿಕ್ಷಕಿ ದೀಪಿಕಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ