
ನಂಜನಗೂಡು (ಜ.19): ಕಪಿಲ ನದಿಗೆ ಸ್ನಾನಕ್ಕೆ ಹೋಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ನಡೆದಿದೆ. ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಮೃತ ದುರ್ದೈವಿಗಳು. ಮೃತರನ್ನು ತುಮಕೂರು ಮೂಲದವರೆಂದು ಗುರುತಿಸಲಾಗಿದೆ.
ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ನಂಜನಗೂಡಿಗೆ ಬಂದಿದ್ದರು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ನದಿಯಲ್ಲಿ ಇಳಿದವರ ಪೈಕಿ ಇಬ್ಬರು ಈಜಿ ಮೇಲೆ ಬಂದಿದ್ದಾರೆ. ಉಳಿದ ಮೂವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಸ್ವಪಕ್ಷದ ವಿರುದ್ಧ ಬಿಕೆ ಹರಿಪ್ರಸಾದ್ ಮತ್ತೆ ಕಿಡಿ
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದರು.ಬಳಿಕ ಘಟನೆ ತಿಳಿದು ಶಾಸಕ ದರ್ಶನ್ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನಕಪುರ: ಕುರಿ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ತಂದೆ-ಮಗ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ