
ಗದಗ, (ಮೇ.12): ತಾಲೂಕಿನ ಹರ್ತಿ ಬಳಿ ಈ ಭೀಕರ ಆಪಘಾತ ಸಂಭವಿಸಿದ್ದು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ನಿಮ್ಮ-ನಿಮ್ಮ ಜಿಲ್ಲಾಸುದ್ದಿಗಾಗಿ ಕ್ಲಿಕ ಮಾಡಿ
ಡಿಕ್ಕಿಯ ರಭಸಕ್ಕೆ ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದೆ. ಪರಿಣಾಮ ಚಾಲಕನೂ ಸಹ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ.
ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರುಳುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಲಾಕ್‌ಡೌನ್ ವೇಳೆ ಯಾವುದೇ ವಾಹನ ಸಂಚಾರ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಅಂತ್ಯಕ್ರಿಯೆಯಲ್ಲಿ ಕೇವಲ 5 ಜನರಿಗೆ ಮಾತ್ರ ಅವಕಾಶ ಕೊಟ್ಟಿದೆ.
ಆದ್ರೆ, ಇವರು ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳಲು ಹೋಗಿ ಈಗ ತಾವು ಸಹ ಮಸಣ ಸೇರಿದ್ದಾರೆ. ಸರ್ಕಾರದ ನಿಯಮ ಪಾಲಿಸಿದ್ರೆ, ಅಪಘಾತವು ಆಗುತ್ತಿರಲ್ಲಿ ಜೀವ ಸಹ ಹೋಗುತ್ತಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ