ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ಬಳಕೆಗೆ ಆಕ್ಷೇಪ, ಮೂವರ ಬಂಧನ

Published : Aug 15, 2021, 09:21 PM ISTUpdated : Mar 29, 2022, 02:24 PM IST
ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್  ಫೋಟೋ ಬಳಕೆಗೆ ಆಕ್ಷೇಪ, ಮೂವರ ಬಂಧನ

ಸಾರಾಂಶ

* ದಕ್ಷಿಣ ಕನ್ನಡದಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣ  * ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ್ದ ಎಸ್​ಡಿಪಿಐ ಕಾರ್ಯಕರ್ತರ ಬಂಧನ  * ಆರೋಪಿಗಳಿಗೆ14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಮಂಗಳೂರು, (ಆ.14): ಎಲ್ಲೆಡೆ 75ನೇ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ರಥದಲ್ಲಿ ಸಾರ್ವಕರ್ ಪೋಟೋ ಬಳಿಕೆ ಸಂಬಂಧ ಗಲಾಟೆ ನಡೆದಿದೆ. 

ಹೌದು.. ಇಲ್ಲಿನ ಕಬಕ ಎಂಬಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್​ಡಿಪಿಐನಿಂದ ಅಡ್ಡಿಪಡಸಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು,, ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ್ದ ಎಸ್​ಡಿಪಿಐ ಕಾರ್ಯಕರ್ತರಾದ ಅಝೀಜ್‌. ಕೆ, ಸಮೀರ್ ಅಬ್ದುಲ್ ರೆಹಮಾನ್​ಗೆ​ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. 

ಸ್ವಾತಂತ್ರ್ಯ ರಥ ಯಾತ್ರೆಗೆ SDPI ಅಡ್ಡಿ ಪ್ರಕರಣ; ನಳೀನ್ ಕುಮಾರ್ ಕಟೀಲ್ ಆಕ್ರೋಶ!

ಎಸ್​ಡಿಪಿಐ ಕಾರ್ಯಕರ್ತರು ಕಬಕ ಗ್ರಾಮ ಪಂಚಾಯಿತಿಯ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ್ದರು. ವೀರಸಾವರ್ಕರ್ ಚಿತ್ರ ಹಾಕಿದ್ದನ್ನು ವಿರೋಧಿಸಿ ರಥಕ್ಕೆ ತಡೆ ಒಡ್ಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಫೋಟೋ ವಿಚಾರಕ್ಕೆ ಜಟಾಪಟಿ ನಡೆದಿದ್ದು, ರಥದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿತ್ತು.  ಘಟನೆ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಪೋಲೀಸ್ ಬಂದೋಬಸ್ತ್ ಹೆಚ್ಚಾಗಿದೆ. 

ದಕ್ಷಿಣಕನ್ನಡ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಸ್ಥಳೀಯ ಪೋಲೀಸರಿಂದ ಅಡಿಷನಲ್ ಎಸ್​ಪಿ ಡಾ. ಶಿವಕುಮಾರ್ ಮಾಹಿತಿ ಪಡೆದಿದ್ದಾರೆ. ಪ್ರಭಾರ ಎಸ್​ಪಿ ಬದ್ರಿನಾಥ್, ಪುತ್ತೂರು ನಗರ ಪೋಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?