ಉಲ್ಲಾಳ ಸಮೀಪದ ಸೊಣ್ಣೇನಹಳ್ಳಿ ನಿವಾಸಿ ನವೀನ್ ಮೃತ. ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕಳೆದ ಮೂರು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸುಮಾರು 8.30ಕ್ಕೆ ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಬಳಿಕ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು(ಏ.13): ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಉಲ್ಲಾಳ ಸಮೀಪದ ಸೊಣ್ಣೇನಹಳ್ಳಿ ನಿವಾಸಿ ನವೀನ್(30) ಮೃತ. ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕಳೆದ ಮೂರು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸುಮಾರು 8.30ಕ್ಕೆ ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಬಳಿಕ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ನವೀನ್ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಬೆಳಗ್ಗೆ ಕೆಲಸಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಹೊರಟಿದ್ದರು. ಮಾರ್ಗ ಮಧ್ಯೆ ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನ ನಿಲುಗಡೆ ಮಾಡಿ ಬಳಿಕ ಏಕಾಏಕಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
undefined
ಬೆಂಗಳೂರು: ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ
ಈ ವೇಳೆ ಅಲ್ಲೇ ಸಂಚಾರ ನಿರ್ವಹಣೆ ಕರ್ತವ್ಯದಲ್ಲಿ ನಿರತರಾಗಿದ್ದ ಸಂಚಾರ ಪೊಲೀಸರು ಹಾಗೂ ಸಾರ್ವಜನಿಕರು ಓಡಿ ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ನವೀನ್‌ರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ನವೀನ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ನವೀನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತನ ಬಳಿ ಯಾವುದೇ ಮರಣಪತ್ರವೂ ಸದ್ಯಕ್ಕೆ ಸಿಕ್ಕಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.