ಸಿನಿಮೀಯ ರೀತಿಯಲ್ಲಿ ಕ್ಯಾಂಟರ್ ವಾಹನವೊಂದನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಅದರಲ್ಲಿದ್ದ ₹32 ಲಕ್ಷ ನಗದು ಹಣವನ್ನು ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ವಿಜಯಪುರ (ಮೇ.19): ಸಿನಿಮೀಯ ರೀತಿಯಲ್ಲಿ ಕ್ಯಾಂಟರ್ ವಾಹನವೊಂದನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಅದರಲ್ಲಿದ್ದ ₹32 ಲಕ್ಷ ನಗದು ಹಣವನ್ನು ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಹಲ್ಲೆಗೆ ಒಳಗಾಗಿದ್ದು, ಕೊಲ್ಹಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವವರಿಗೆ ಸೇರಿದ ಹಣ ಇದಾಗಿದೆ.
undefined
60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು
ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರುವ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿದ್ದು, ಅದರಿಂದ ಬಂದಿದ್ದ ₹32 ಲಕ್ಷ ಹಣವನ್ನು ವಾಪಸ್ ಜೇವರ್ಗಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೊಲೆರೋ ವಾಹನದ ಮೂಲಕ ಅಡ್ಡಗಟ್ಟಿದ ಕದೀಮರು, ಕ್ಯಾಂಟರ್ ಗಾಜಿಗೆ ಕಲ್ಲು ಹೊಡೆದು, ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ರಾಡ್‌ನಿಂದ ಹೊಡೆದು ಹಲ್ಲೆ ಮಾಡಿ, ಕ್ಯಾಂಟರ್‌ನಲ್ಲಿಟ್ಟಿದ್ದ ₹32 ಲಕ್ಷ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಕರಾವಳಿ ಬಿಜೆಪಿಗರ ಕಡೆಗಣನೆ ವಿರುದ್ಧ ನನ್ನ ಸ್ಪರ್ಧೆ: ರಘುಪತಿ ಭಟ್
ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ನಾನು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು.
-ಋಷಿಕೇಶ ಸೋನಾವಣೆ, ವಿಜಯಪುರ ಎಸ್ಪಿ