
ದಾಬಸ್‌ಪೇಟೆ(ಅ.04): ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಮಾಡಿದ ಸಾಲ ತೀರಿಸಲಾಗದೆ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಂಪುರ ಹೋಬಳಿಯ ಅರಳಿಮರದಪಾಳ್ಯ ಗ್ರಾಮದ ಯುವಕ ರಾಜು (32) ಮೃತ ದುರ್ದೈವಿ.
ಈತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈತ ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿದ್ದನು ಎನ್ನಲಾಗಿದೆ.
ಬೀದರ್: ಖಾಸಗಿ ಫೋಟೋ ಲೀಕ್, ಯುವಕನ ಕಿರುಕುಳ ತಾಳದೆ ಬಾಲಕಿ ಆತ್ಮಹತ್ಯೆ
ಸಾಲಗಾರರು ಕೊಟ್ಟ ಹಣವನ್ನು ಹಿಂತಿರುಗಿಸುವಂತೆ ಕೇಳುತ್ತಿದ್ದರು. ಇದರಿಂದಾಗಿ ಸಾಲ ತೀರಿಸಲು ಹಣವನ್ನು ಹೊಂದಿಸಲಾಗದೆ ಚಿಂತಿಗೀಡಾಗಿದ್ದನು. ತಾಯಿ ಕೆಲಸಕ್ಕೆಂದು ಹೊರ ಹೋದಾಗ ಕೀಟನಾಶಕ ಔಷಧ ತಂದು ಕುಡಿದಿದ್ದಾನೆ. ಬಳಿಕ ಅಕ್ಕ-ಪಕ್ಕದ ಜನರು ಗಮನಿಸಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ