
ದೇವದುರ್ಗ(ಫೆ.18): ಕ್ಷುಲ್ಲಕ ಕಾರಣಕ್ಕೆ ಮಹಿಳೆಯರು ಜಗಳವಾಡಿದ್ದು, ಇದರಿಂದ ಮನನೊಂದು ಮಹಿಳೆಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊನ್ನಟಗಿಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದ ಬಸನಗವಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ದೇವಮ್ಮ ಹಾಗೂ ಆರೋಪಿ ದುರುಗಮ್ಮ ಅವರ ನಡುವೆ ವಿನಾಕಾರಣಕ್ಕೆ ಜಗಳ ಶುರುವಾಗಿದ್ದು, ಇದರಿಂದ ಮನನೊಂದ ದೇವಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಂತೂರು ಸಕ್ಕರೆ ಕಾರ್ಖಾನೆ ಸುರಿದ ಬೆಂಕಿಯ ಬೂದಿಯಲ್ಲಿ ಸುಟ್ಟುಹೋದ ರೈತ, ನೋವು ತಾಳಲಾರದೇ ಆತ್ಮಹತ್ಯೆ!
ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾವಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿದರು. ಘಟನೆಗೆ ಸಂಬಂಧಿಸಿದಂತೆ ಮೃತ ದೇವಮ್ಮಳೊಂದಿಗೆ ಜಗಳವಾಡಿದ ಆರೋಪಿ ದುರುಗಮ್ಮ ಹಾಗೂ ಆಕೆಯ ಪತಿ ಸಿದ್ದಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ