
ಯಾದಗಿರಿ(ನ.02): ಹಳೆ ವೈಷಮ್ಯದ ಹಿನ್ನಲೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. ತಿಪ್ಪಣ್ಣ(35) ಕೊಲೆಯಾದ ದುರ್ದೈವಿ.
ಬೈಕ್ ಮೇಲೆ ತೆರಳ್ತಿದ್ದ ತಿಪ್ಪಣ್ಣನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಕೊಲೆಯಾದ ತಿಪ್ಪಣ್ಣ ಜಾಪಾನಾಯ್ಕ್ ತಾಂಡಾ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ತಿಪ್ಪಣ್ಣ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಶಹಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ