Chikkamagaluru: ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿ ಘೋಷಣೆ ಕೂಗಿದ ಕಿಡಿಗೇಡಿಗಳು!

By Govindaraj S  |  First Published Nov 11, 2022, 9:34 AM IST

ವಿಶ್ವಕಪ್‌ನಲ್ಲಿ ಕಿವೀಸ್ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡ ಗೆಲುವು ಸಾಧಿಸಿದ್ದಕ್ಕೆ ಕಾಫಿನಾಡಿನಲ್ಲಿ ಕೆಲ ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿ ಸಂಭ್ರಮಿಸಿರುವ ವಿಲಕ್ಷಣ ಘಟನೆ ನಡೆದಿದೆ.


ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ನ.11): ವಿಶ್ವಕಪ್‌ನಲ್ಲಿ ಕಿವೀಸ್ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ತಂಡ ಗೆಲುವು ಸಾಧಿಸಿದ್ದಕ್ಕೆ ಕಾಫಿನಾಡಿನಲ್ಲಿ ಕೆಲ ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿ ಸಂಭ್ರಮಿಸಿರುವ ವಿಲಕ್ಷಣ ಘಟನೆ ನಡೆದಿದೆ.

Latest Videos

undefined

ಅಸ್ಲಾಂ ಮೂಲದ ವ್ಯಕ್ತಿಯಿಂದ ಘೋಷಣೆ: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕೆಲ ಕಿಡಿಗೇಡಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದಾರೆ. ಕಾಫಿನಾಡಿನಲ್ಲಿ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾ ನುಸುಳುಕೋರರು ದೊಡ್ಡ ಮಟ್ಟದಲ್ಲಿ ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಬಹಳ ಸಮಯದಿಂದ ಕೇಳಿಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರೂ ಅಕ್ರಮ ನುಸುಳುಕೊರರನ್ನು ಪತ್ತೆಹಚ್ಚುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ.

Chikkamagaluru: ಅಡಕೆಗೆ ಎಲೆಚುಕ್ಕಿರೋಗ, ಹಳದಿ ರೋಗ ಸಾಲಬಾಧೆಯಿಂದ ರೈತ ಆತ್ಮಹತ್ಯೆ

ವಲಸಿಗರ ದಾಖಲೆ ಸಂಗ್ರಹಿಸಲು ಕೆಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರ ನಡುವೆ  ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಾಲ್ವರು ಅಸ್ಲಾಂ ಮೂಲದ ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಬೆಳವಣಿಗೆ ಜನರ ಭ್ರದ್ರತೆಯ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆ ಆಗಿದೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಹೇರೂರು ಸಮೀಪದ ಹುಲ್ಪೆ ಬಳಿ ರಸ್ತೆಯಲ್ಲಿ ಅಸ್ಸಾಂ ಮೂಲದ , ಆಜಲ್ ಆಲಿ, ಆಹಿಲ್ ಉದ್ದೀನ್ ಹಾಗೂ ಇನ್ನಿಬ್ಬರು ಕಾರ್ಮಿಕರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದಾರೆ.ಘೋಷಣೆ ಕೂಗಿದ್ದನ್ನು ಗಮನಿಸಿದ್ದಾರೆ. 

ಹಿಂದು ಸಾಮರ್ಥ್ಯ ಏನೆಂಬುದು ಸತೀಶ್ ಜಾರಕಿಹೊಳಿಗೆ ತೋರಿಸಬೇಕು: ಸಿ.ಟಿ. ರವಿ

ನಂತರ ಸ್ಥಳೀಯರು ಅಸ್ಸಾಂ ಕಾರ್ಮಿಕರ ದೇಶದ್ರೋಹಿ ಘೋಷಣೆ ಕೃತ್ಯದ ಕುರಿತು ಎಸ್ಟೇಟ್‌ನ ಮ್ಯಾನೇಜರ್ ಗಮನಕ್ಕೆ ತಂದಿದ್ದಾರೆ. ವಿಷಯದ ಗಂಭೀರತೆ ಅರಿತ ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರು ಸಮೀಪದ ಬಾಳೆಹೊನ್ನೂರು ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ  ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

click me!