
ವಿಶಾಖಪಟ್ಟಣಂ (ಡಿಸೆಂಬರ್ 27,2022): ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿ (Anakapalli) ಜಿಲ್ಲೆಯ ಫಾರ್ಮಾ ಕಂಪನಿ ಲ್ಯಾಬ್‌ನಲ್ಲಿ (Pharma Company Lab) ಡಿಸೆಂಬರ್ 26, 2022ರ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತು ಒಬ್ಬ ವ್ಯಕ್ತಿಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಜವಾಹರಲಾಲ್ ನೆಹರೂ ಫಾರ್ಮಾ ಸಿಟಿಯಲ್ಲಿರುವ (Jawaharlal Nehru Pharma City) ಲಾರಸ್ ಲ್ಯಾಬ್ಸ್ ಲಿಮಿಟೆಡ್‌ನ ಯುನಿಟ್-III ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕಾರ್ಮಿಕರು (Workers) ಘಟಕವನ್ನು ಸ್ವಚ್ಛಗೊಳಿಸುವ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ಅವಘಡ ಸಂಭವಿಸಿದೆ ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. ಟೋಲ್ಯೂನ್ ದ್ರಾವಕ ಸೋರಿಕೆಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಕಾರ್ಖಾನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಟೋಲ್ಯೂನ್ ಸೋರಿಕೆಯನ್ನು ತಡೆಯಲು ಕಾರ್ಮಿಕರು ಪ್ರಯತ್ನಿಸಿದಾಗ ರಾಸಾಯನಿಕಕ್ಕೆ ಬೆಂಕಿ ಕಾಣಿಸಿಕೊಂಡಿತು ಎಂದು ತಿಳಿದುಬಂದಿದೆ.
ಇನ್ನು, ವಿಶಾಖಪಟ್ಟಣಂನ ಫಾರ್ಮಾ ಸಿಟಿಯಲ್ಲಿರುವ ಲಾರಸ್ ಕಂಪನಿಯ ಯುನಿಟ್ -3 ರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ಫಾರ್ಮಸಿ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಇದನ್ನು ಓದಿ: ಊರಗೌಡ್ತಿಯ ಶವಸಂಸ್ಕಾರಕ್ಕೆ ಬಂದವರಿಗೆ ಶಾಕ್: ಶವಯಾತ್ರೆ ವೇಳೆ ಸಿಡಿದ ಪಟಾಕಿಯಿಂದ ಭಾರೀ ಅಗ್ನಿ ಅವಘಡ
ಲಾರಸ್ ಲ್ಯಾಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವುದನ್ನು ಅನಕಪಲ್ಲಿ ಪೊಲೀಸ್ ಮುಖ್ಯಸ್ಥ ಗೌತಮಿ ಸಾಲಿ ಖಚಿತಪಡಿಸಿದ್ದಾರೆ. ಆದರೆ, ಈ ಘಟನೆಯಲ್ಲಿನ ಸಾವುನೋವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದೂ ಅವರು ಹೇಳಿದರು. ಇನ್ನು, ಮೃತರನ್ನು ಗುಂಟೂರು ಮೂಲದ ಟಿ. ರಾಜೇಶ್ ಬಾಬು, ಕೋಟಾಪಾಡುವಿನ ಆರ್ ರಾಮಕೃಷ್ಣ, ಖಮ್ಮಂದ ಮೂಲದ ಬಿ ರಾಂಬಾಬು ಮತ್ತು ಛೋಡಾವರಂ ಮೂಲದ ಮಜ್ಜಿ ವೆಂಕಟರಾವ್ ಹಾಗೂ ಗಾಯಾಳುವನ್ನು ವೈ. ಸತೀಶ್ ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾರ್ಮಾ ನಗರದ ಲಾರಸ್ ಕಂಪನಿಯ ಯುನಿಟ್ -3 ರಲ್ಲಿ ಅನಿಲ ಸೋರಿಕೆ ಸಂಭವಿಸಿದೆ. ಕೆಲವು ಕಾರ್ಮಿಕರು ಅನಿಲ ಸೋರಿಕೆಯನ್ನು ತಡೆಯಲು ಪ್ರಯತ್ನಿಸಿದರು. ಆದರೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿತು. ಈ ಘಟನೆಯಲ್ಲಿ ಇಬ್ಬರು ಗುತ್ತಿಗೆ ಕಾರ್ಮಿಕರು ಮತ್ತು ಇಬ್ಬರು ಕಾಯಂ ಕಾರ್ಮಿಕರು ಸೇರಿದಂತೆ 4 ಮಂದಿ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸತೀಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪರ್ವಾಡ ಪೊಲೀಸ್ ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದೂ ತಿಳಿಸಿದ್ದಾರೆ.
ಇದನ್ನೂ ಓದಿ: ಅಗ್ನಿ ಅವಘಡದ ಭೀತಿ: 71,000 ಕಾರುಗಳನ್ನು ಹಿಂಪಡೆಯಲಿರುವ ಕಿಯಾ
ಇನ್ನೊಂದೆಡೆ, ಜೆಎನ್‌ಪಿಸಿಯಲ್ಲಿನ ವಿವಿಧ ಫಾರ್ಮಾ ಸಂಸ್ಥೆಗಳ ಆಡಳಿತವು ಸುರಕ್ಷತಾ ಮಾನದಂಡಗಳನ್ನು ನಿರ್ಲಕ್ಷಿಸುತ್ತಿದೆ. ಹಾಗೂ, ಈ ಬಗ್ಗೆ ಮೌನವಾಗಿರಲು ವಿವಿಧ ಇಲಾಖೆಗಳ ಅಧಿಕಾರಿಗಳು ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಕಾರ್ಮಿಕ ಸಂಘಟನೆಗಳ ಹಲವು ಮುಖಂಡರು ಹೇಳಿದ್ದಾರೆ.
ಇದನ್ನೂ ಓದಿ: Secunderabad: ಇ-ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; 8 ಸಾವು, ಮೇಲಿನ ಮಹಡಿಗಳಿಂದ ಪ್ರಾಣ ಉಳಿಸಿಕೊಳ್ಳಲು ಜಿಗಿದ ಹಲವರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ