Hubballi: ಇನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವು: ನಾಲ್ವರು ಗಂಭೀರ ಗಾಯ

By Suvarna NewsFirst Published Mar 18, 2022, 2:23 PM IST
Highlights

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ದಾರುವಾಗಿ ಸಾವನ್ನಪ್ಪಿದ ಘಟನ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಸಂಭವಿಸಿದೆ. 

ಹುಬ್ಬಳ್ಳಿ (ಮಾ.18): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ದಾರುವಾಗಿ ಸಾವನ್ನಪ್ಪಿದ ಘಟನ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಚಿಕ್ಕಬಳ್ಳಾಪುರ ಮೂಲದ ಆರು‌ ಜನರು ಇನ್ನೋವಾ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ಕಡೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ, ಮೃತರನ್ನು ರಂಜಿತ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದ್ದು, ಅತಿಯಾದ ವೇಗವಾಗಿ ಕಾರು ಚಲಾಯಿಸಿದ್ದೇ ಅವಘಾತಕ್ಕೆ‌ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುರೆಸಿದ್ದಾರೆ.

Latest Videos

ಸ್ಟೇರಿಂಗ್‌ ತುಂಡಾಗಿ ಹಳ್ಳಕ್ಕೆ ಬಿದ್ದ ಬಸ್‌: ಸ್ಟೇರಿಂಗ್‌ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ(KSRTC) ಬಸ್ಸೊಂದು ಕಿರು ಸೇತುವೆಯ ಹಳ್ಳಕ್ಕೆ ಮಗುಚಿ ಬಿದ್ದ ಪರಿಣಾಮ ಮೂವ​ರು ಮೃತ​ಪ​ಟ್ಟು(Death), 96 ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಕುಡುವಾಳೆ ಗ್ರಾಮ ಸಮೀಪದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.  ತಾಲೂಕಿನ ಮಾಳಿಗನತ್ತ ಗ್ರಾಮದ ಶಿವಮ್ಮ(60), ಸಣ್ಣರಾಯಪ್ಪ(40), ಪಿ.ಜಿ.ಪಾಳ್ಯ ಗ್ರಾಮದ ರಮೇಶ್‌(30) ಮೃತ​ರು. 

ಅಪಘಾತದಲ್ಲಿ ತೀರಿಕೊಂಡ ಮಗನ ನೆನಪಿಗೆ ಪ್ರತಿಮೆ ಪ್ರತಿಷ್ಠಾಪನೆ

ತಾಲೂಕಿನ ಕುಡುವಾಳೆ ಗ್ರಾಮದ ಮೂಲಕ ಪಿ.ಜಿ ಪಾಳ್ಯ ಹಾಗೂ ಒಡೆಯರಪಾಳ್ಯದ ಕಡೆಗೆ ಸೋಮವಾರ ಮಧ್ಯಾಹ್ನ ತೆರ​ಳು​ತ್ತಿದ್ದ ಬಸ್‌ನಲ್ಲಿ ಸುಮಾರು 100ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಕುಡು​ವಾಳೆ ಗ್ರಾಮದಲ್ಲಿ ಸಂಚರಿಸುತ್ತಿದ್ದ ವೇಳೆ ಬಸ್‌ನ ಸ್ಟೇರಿಂಗ್‌(Steering) ರಾಡ್‌ ತುಂಡಾದ ಪರಿಣಾಮ ಚಾಲಕ ನಿಯಂತ್ರಣ ತಪ್ಪಿದ್ದಾನೆ. ಪರಿಣಾಮ ಕುಡುವಾಳೆ ಮಾಳಿಗನತ್ತ ಕಿರು ಸೇತುವೆಯ ಹಳ್ಳಕ್ಕೆ ಮಗುಚಿ ಬಿದ್ದಿದೆ. ಈ ವೇಳೆ ಜನರ ಕೀರಾಟದ ಶಬ್ದ ಕೇಳಿದ ಅಕ್ಕಪಕ್ಕದ ಜಮೀನಿನಲ್ಲಿದ್ದ ಜನರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದ ಜನರನ್ನು ಮೇಲೆಕ್ಕೆತ್ತಿದರು.

ಈ ವೇಳೆ ಗಾಯಾಳುಗಳನ್ನು ಗೂಡ್ಸ್‌ ವಾಹನ, ಆ್ಯಂಬುಲೆನ್ಸ್‌ ಮೂಲಕ ಪಿ.ಜಿ ಪಾಳ್ಯ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ(Treatment) ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್‌ ಕಂದಕಕ್ಕೆ ಉರುಳಿ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ: ಸಾರಿಗೆ ಸಂಸ್ಥೆಯ ಬಸ್‌ ಕಂದಕಕ್ಕೆ ಉರುಳಿದ ಪರಿಣಾಮ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ(Passengers) ಗಾಯಗಳಾಗಿರುವ ಘಟನೆ ಸಮೀಪದ ಗೋವನಾಳ ಹತ್ತಿರ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಜಿಮ್ಸ್‌ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

Mandya Accident: ಪಿಲ್ಲರ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌ಗೆ ಬೆಂಕಿ: ಡ್ರೈವರ್‌ ಸಜೀವ ದಹನ

ಗದಗ(Gadag) ಕಡೆಯಿಂದ ಲಕ್ಷ್ಮೇಶ್ವರ ಮಾರ್ಗವಾಗಿ ಹಾವೇರಿಗೆ(Haveri) ತೆರಳುತ್ತಿದ್ದ ಬಸ್‌ ಗೋವನಾಳ ಗ್ರಾಮದ ಸ್ಮಶಾನ ಹತ್ತಿರದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಹೊಡೆದಿದೆ. ಮಾಹಿತಿ ಅರಿತ ಗೋವನಾಳ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆದು ಆ್ಯಂಬುಲೆನ್ಸ್‌ ಮೂಲಕ ಲಕ್ಷ್ಮೇಶ್ವರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. 

ಗಾಯಗೊಂಡ ಪ್ರಯಾಣಿಕರನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ(Treatment) ನೀಡಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಕೆಲ ಜನರ ಸ್ಥಿತಿ ಗಂಭೀರವಾಗಿದ್ದು, ಕೆಲವರ ಕೈ ಕಾಲು ಮುರಿದಿವೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಗಾಯಗೊಂಡವರ ರೋಧನ ಹೇಳ ತೀರದಾಗಿತ್ತು. 

click me!