ಹುಬ್ಬಳ್ಳಿ: ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Published : Jan 29, 2025, 05:00 AM IST
ಹುಬ್ಬಳ್ಳಿ: ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಾರಾಂಶ

ಪೀಟ‌ರ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ 'ಡ್ಯಾಡಿ ಆಯಾಮ್ ಸ್ಸಾರಿ, ಪಿಂಕಿ (ಪತ್ನಿ) ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್' ಎಂದು ಬರೆದಿದ್ದಾನೆ. 

ಹುಬ್ಬಳ್ಳಿ(ಜ.29):  ಪತ್ನಿಯ ಕಿರುಕುಳ ತಾಳಲಾರದೇ ಪತಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಇಲ್ಲಿನ ಚಾಮುಂಡೇಶ್ವರಿ ನಗರದಲ್ಲಿ ಭಾನುವಾರ ನಡೆದಿದ್ದು, ಆತನ ಕೊನೆಯ ಆಸೆಯಂತೆ ಶವಪೆಟ್ಟಿಗೆಯ ಮೇಲೆ 'ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು' ಎನ್ನುವ ಒಕ್ಕಣಿಕೆ ಬರೆಸುವ ಮೂಲಕ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಪೀಟ‌ರ್ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ 'ಡ್ಯಾಡಿ ಆಯಾಮ್ ಸ್ಸಾರಿ, ಪಿಂಕಿ (ಪತ್ನಿ) ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್' ಎಂದು ಬರೆದಿದ್ದಾನೆ. ಅಲ್ಲದೇ ನನ್ನ ಶವದ ಪೆಟ್ಟಿಗೆ ಮೇಲೆ ಹೆಂಡತಿಯ ಕಿರುಕುಳವೇ ನನ್ನ ಸಾವಿಗೆ ಕಾರಣ ಎಂದು ಬರೆಯಿಸುವಂತೆ ಮೃತ ಪೀಟರ್‌ಮನವಿ ಮಾಡಿದ್ದರಂತೆ. ಹೀಗಾಗಿ ಶವದ ಪೆಟ್ಟಿಗೆ ಮೇಲೆ 'ನನ್ನ ಹೆಂಡತಿಯಕಾಟತಾಳಲಾರದೆ ಸತ್ತೆ' ಎಂದು ಬರೆಸುವ ಮೂಲಕ ಕುಟುಂಬ ಸ್ಥರು ಪೀಟರ್‌ನ ಕೊನೆ ಆಸೆ ಈಡೇರಿಸಿದ್ದಾರೆ. 

ಮೈಕ್ರೋ ಫೈನಾನ್ಸ್ ಕಿರುಕುಳ: ಮತ್ತೆ ಮೂವರು ಆತ್ಮಹತ್ಯೆ

20 ಲಕ್ಷಕ್ಕೆ ಬೇಡಿಕೆ: 

ಮೃತ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಪಿಂಕಿ ಖಾಸಗಿ ಶಾಲಾ ಶಿಕ್ಷಕಿಯಾಗಿದ್ದಾರೆ. ಇವರಿಬ್ಬರು ಕಳೆದ ಏಳೆಂಟು ತಿಂಗಳಿಂದ ಬೇರೆ ಬೇರೆಯಾಗಿಯೇ ಜೀವನ ನಡೆಸುತ್ತಿದ್ದರು. ಪತ್ನಿ ವಿಚ್ಛೇದನಕ್ಕೆ ಕೋಟ್ ೯ನಲ್ಲಿ ಅರ್ಜಿ ಸಲ್ಲಿಸಿದ್ದು ಜೀವನಾಂಶವಾಗಿ ಈ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಳು ಎಂದು ತಿಳಿದು ಬಂದಿದೆ. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮಗನೊಂದಿಗೆ ಜಗಳ ಮಾಡುತ್ತಿದ್ದಳು. ಹೀಗಾಗಿ ನನ್ನ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ಓಬಯ್ಯ ಹಾಗೈ, ತಾಯಿ ರುಬಿಕಮ್ಮ ಆರೋಪಿಸಿದ್ದಾರೆ. ಪಿಂಕಿ ಹಾಗೂ ಅವರ ಕುಂಟುಂಬದವರನ್ನು ಬಂಧಿಸಿ ಶಿಕ್ಷೆ ನೀಡುವ ಮೂಲಕ ಮಗನ ಸಾವಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾ ಯಿಸಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿ ಕೊಂಡಿರುವ ಅಶೋಕ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!
ದಂಪತಿ, ಪಾಲಿಕೆ ಅಧಿಕಾರಿಗಳ ಕಿರುಕುಳಕ್ಕೆ ಟೆಕ್ಕಿ ದುರಂತ ಸಾವು, ಡೆಟ್‌ನೋಟ್‌ನಲ್ಲಿ ಶಾಕಿಂಗ್ ಮಾಹಿತಿ!