ಒಡೆಯರ್ ಎಕ್ಸ್ ಪ್ರೆಸ್ ರೈಲಿಗೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಮೈಸೂರಿಗೆ ರೈಲು ಹೊರಟಿತ್ತು. ರೈಲು ಹೊರಡುತ್ತಿದ್ದಂತೆ ರೈಲಿನಿಂದ ಇಳಿದು ಅದೇ ರೈಲಿಗೆ ಚಕ್ರಕ್ಕೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರು(ಜು.25): ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಇಂದು(ಗುರುವಾರ) ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸುಶಾಂತ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಒಡೆಯರ್ ಎಕ್ಸ್ ಪ್ರೆಸ್ ರೈಲಿಗೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಮೈಸೂರಿಗೆ ರೈಲು ಹೊರಟಿತ್ತು. ರೈಲು ಹೊರಡುತ್ತಿದ್ದಂತೆ ರೈಲಿನಿಂದ ಇಳಿದು ಅದೇ ರೈಲಿಗೆ ಚಕ್ರಕ್ಕೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಮ್ಮಾ ಕ್ಷಮಿಸಿ ಬಿಡು, ಅಳುತ್ತಾ ಕೊನೆಯ ವಿಡಿಯೋ ಪೋಸ್ಟ್ ಮಾಡಿ ರೈಲಿಗೆ ತಲೆ ಕೊಟ್ಟ ಪತ್ರಕರ್ತೆ!
ಆತ್ಮಹತ್ಯೆಗೆ ಶರಣಾದ ಸುಶಾಂತ್ ಮೈಸೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸುಶಾಂತ್ ಒಡೆಯರ್ ಎಕ್ಸ್ ಪ್ರೆಸ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಎಂದು ತಿಳಿದು ಬಂದಿದೆ.