ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದ ಘಟನೆ
ಖಾನಾಪುರ(ನ.01): ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ಮಾರುತಿ ಜಾಧವ (45) ಅವರನ್ನು ಅವರ ಪಕ್ಕದ ಮನೆಯ ನಿವಾಸಿ ಪ್ರಶಾಂತ ನಾರ್ವೇಕರ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇವರಿಬ್ಬರ ನಡುವೆ ಬಹಳ ದಿನದಿಂದ ದ್ವೇಷವಿತ್ತು. ಭಾನುವಾರ ರಾತ್ರಿ ಇವರಿಬ್ಬರೂ ತಮ್ಮ ಮನೆ ಮುಂದಿನ ಬೀದಿಯಲ್ಲಿ ಜಗಳವಾಡಿಕೊಂಡಿದ್ದಾರೆ. ಬಳಿಕ ಪ್ರಶಾಂತ ಸಿಟ್ಟಿನ ಭರದಲ್ಲಿ ಮಾರುತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಾರುತಿ ಅವರ ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಭಾಗಕ್ಕೆ ಚುಚ್ಚಿ ಕೊಲೆಗೈದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನನ್ನೇ ಕೊಂದ ಮಹಿಳೆ..!
ಘಟನೆಯ ಬಳಿಕ ಪ್ರಶಾಂತ ಅವರನ್ನು ಪೊಲೀಸರು ಅವರ ಮನೆಯ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಮಾರುತಿ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಸೋಮವಾರ ಮಧ್ಯಾಹ್ನ ಪಟ್ಟಣದ ಸ್ಮಶಾನದಲ್ಲಿ ಮಾರುತಿ ಅವರ ಮೃತದೇಹದ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.