
ಚಿಕ್ಕೋಡಿ(ಅ.05): ಜಮೀನಿನಲ್ಲಿ ರಸ್ತೆ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ನೇಜ - ಶಮನೇವಾಡಿ ರಸ್ತೆ ಬಳಿ ಇಂದು(ಶನಿವಾರ) ನಡೆದಿದೆ. ಸುನೀಲ್ ಖೋತ್ (45) ಕೊಲೆಯಾದ ದುರ್ದೈವಿ.
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸುನೀಲ್ ಖೋತ್ ಸಾವನ್ನಪ್ಪಿದ್ದಾನೆ. ಕೊಲೆಯಾದ ಸುನೀಲ್ ಶಮನೇವಾಡಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದ ನಿವಾಸಿಯಾಗಿದ್ದಾನೆ.
ಬೇಕಾ ಇಂಥಾ ಮಕ್ಕಳು? ಹೆತ್ತಮ್ಮನ ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟ ಇಬ್ಬರು ಗಂಡು ಮಕ್ಕಳು
ಹಲವು ವರ್ಷಗಳಿಂದ ರಸ್ತೆ ವಿಚಾರವಾಗಿ ಕಲಹ ಇತ್ತು. ಇಂದು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಅಣ್ಣ- ತಮ್ಮಂದಿರು. ಸಂಜೆ ರಾಜಿ ಪಂಚಾಯ್ತಿ ಮಾಡೋಣ ಎಂದು ಪೊಲೀಸರು ಸಮಜಾಯಿಸಿ ಕಳುಹಿಸಿದ್ದರು. ಸಂಜೆ ಮತ್ತೆ ಗಲಾಟೆ ಪ್ರಾರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟಟಾ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ