ಬೆಂಗಳೂರು: ಅಪ್ಪ-ಮಗನಿಂದ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ..!

Published : Aug 16, 2023, 04:47 AM IST
ಬೆಂಗಳೂರು: ಅಪ್ಪ-ಮಗನಿಂದ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ..!

ಸಾರಾಂಶ

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಗಳಾದ ಸುಂಕದಕಟ್ಟೆಯ ಚಂದನ ಲೇಔಟ್‌ ನಿವಾಸಿ ಆರ್‌.ನಾಗರಾಜು ಮತ್ತು ಆತನ 17 ವರ್ಷದ ಪುತ್ರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  

ಬೆಂಗಳೂರು(ಆ.16): ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿ ಹಾಗೂ ಆತನ ಅಪ್ರಾಪ್ತ ಮಗನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಗಳಾದ ಸುಂಕದಕಟ್ಟೆಯ ಚಂದನ ಲೇಔಟ್‌ ನಿವಾಸಿ ಆರ್‌.ನಾಗರಾಜು ಮತ್ತು ಆತನ 17 ವರ್ಷದ ಪುತ್ರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಬಾಲಕಿ ತಾಯಿಗೆ ಸಂಬಂಧಿಕರು. ನಾಗರಾಜ್‌ ಕ್ರಷರ್‌ವೊಂದರಲ್ಲಿ ಸೂಪರ್‌ವೈಸರ್‌ ಆಗಿದ್ದು, ಆತನ ಅಪ್ರಾಪ್ತ ಮಗ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ.

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ: 74ರ ನಿವೃತ್ತ ಪಿಎಸ್‌ಐ ಸೆರೆ

ಬಾಲಕಿಯ ತಾಯಿ ಕೆಲಸಕ್ಕೆ ತೆರಳುವಾಗ ಆರೋಪಿ ನಾಗರಾಜ್‌ ಮನೆಯಲ್ಲಿ ಮಗಳನ್ನು ಬಿಟ್ಟು ಹೋಗುತ್ತಿದ್ದರು. ಇತ್ತೀಚೆಗೆ ಬಾಲಕಿಯ ವರ್ತನೆಯಲ್ಲಿ ಬದಲಾವಣೆಗಳಾಗಿದ್ದವು. ಇದನ್ನು ಗಮನಿಸಿದ ತಾಯಿ ಪ್ರಶ್ನಿಸಿದಾಗ, ಆರೋಪಿಗಳು ನೀಡುತ್ತಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿದ್ದಾಳೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!