ರಾಜ್ಯದಲ್ಲಿ ಕೇವಲ 24 ಗಂಟೆಯಲ್ಲೇ ಅಪಘಾತಕ್ಕೆ 51 ಮಂದಿ ದುರ್ಮರಣ!

By Kannadaprabha News  |  First Published May 27, 2024, 5:45 AM IST

ಹಾಸನ ಸೇರಿದಂತೆ ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.


ಬೆಂಗಳೂರು (ಮೇ.27)  :  ಹಾಸನ ಸೇರಿದಂತೆ ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.

ಹಾಸನ ಜಿಲ್ಲೆಯ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಸಂಬಂಧ ತಮ್ಮ ‘ಎಕ್ಸ್‌’ ಜಾಲತಾಣದ ಖಾತೆಯಲ್ಲಿ ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಪೋಸ್ಟ್ ಮಾಡಿದ್ದು, ಅಪಘಾತಗಳಲ್ಲಿ ಸಾವಿನ ಪ್ರಮಾಣ ಏರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ 

Tap to resize

Latest Videos

ಕಾರು-ಟ್ರಕ್ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ಸ್ಥಳದಲ್ಲೇ ದುರ್ಮರಣ!

‘ಹಾಸನ ಸೇರಿದಂತೆ ರಾಜ್ಯ ವ್ಯಾಪ್ತಿ 24 ತಾಸಿನಲ್ಲಿ 51 ಮಂದಿ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಅಪಘಾತ ದುರಂತಗಳಲ್ಲಿ ಸಾವಿನ ಪ್ರಮಾಣದ ಅತಿ ಹೆಚ್ಚಿನ ದಾಖಲೆಯಾಗಿದೆ. ಈ ಅಪಘಾತಗಳಿಗೆ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಪ್ರಮುಖ ಕಾರಣವಾಗಿವೆ’ ಎಂದು ಅವರು ಹೇಳಿದ್ದಾರೆ.

ರಸ್ತೆ ಸುರಕ್ಷತೆ ಕುರಿತು ಜನರು ಅರಿಯಬೇಕು. ಸಂಚಾರ ನಿಯಮಗಳನ್ನು ಪಾಲಿಸಿದರೆ ಜೀವ ರಕ್ಷಣೆ ಸಾಧ್ಯವಾಗುತ್ತದೆ ಎಂದು ಎಡಿಜಿಪಿ ಮನವಿ ಮಾಡಿದ್ದಾರೆ.

click me!