
ಕೆ.ಆರ್. ನಗರ(ಮಾ.21): ಸಾಲಬಾಧೆ ತಾಳಲಾರದೆ ವ್ಯಕ್ತಿಯೋರ್ವ ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದ ಹರೀಶ್ (55) ಎಂಬವರು ಸಾಲಿಗ್ರಾಮ ತಾಲೂಕಿನ ಹೊಸಕೋಟೆ ಮತ್ತು ಮಳಲಿ ಗ್ರಾಮದ ಮಧ್ಯ ಭಾಗದಲ್ಲಿ ಇರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಕಳೆದ ಎರಡು ತಿಂಗಳ ಹಿಂದೆ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಸಿಮೆಂಟ್ ಮತ್ತು ಚಿಲ್ಲರೆ ಅಂಗಡಿ ನಡೆಸುತ್ತಿದ್ದರು. ಹುಣಸೂರು ಪಟ್ಟಣದ ವಾಲೆ ರವಿ ಅವರಿಂದ ಸಾಲ ಪಡೆದಿದ್ದು, ಆತನ ಒತ್ತಡ ತಾಳಲಾರದೆ ಮಂಗಳವಾರ ರಾತ್ರಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಮಗಳನ್ನು ಭೀಕರವಾಗಿ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ನನ್ನ ಸಾವಿಗೆ ವಾಲೆ ರವಿ ಎಂಬಾತನ ಒತ್ತಡವೇ ಕಾರಣ ಎಂಬ ಆಡಿಯೋ ಹರಿಯ ಬಿಟ್ಟಿದ್ದು, ಇದು ಸಾಕಷ್ಟು ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸ್ ಇನ್ಸ್‌ಪೆಕ್ಟರ್ ಕೃಷ್ಣರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ