ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಮಗುವಿನ ತಾಯಿ ನೀಡಿದ ದೂರನು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ (ಡಿ.13): ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಮಗುವಿನ ತಾಯಿ ನೀಡಿದ ದೂರನು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಣ್ಣ (55) ಬಂಧಿತ ವ್ಯಕ್ತಿ. ಮನೆಯ ಬಳಿ ಆಟವಾಡುತ್ತಿದ್ದ ಮಗುವನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದ ಆರೋಪಿ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆಟವಾಡುತ್ತಿದ್ದ ಮಗು, ಮನೆ ಹಾಗೂ ಸುತ್ತಮುತ್ತಲು ಕಾಣದಿದ್ದಾಗ ತಾಯಿ ಮತ್ತು ಅಕ್ಕಪಕ್ಕದ ಮನೆಯವರು ಹುಡಕಾಡಿದ್ದಾರೆ. ಈ ವೇಳೆ ಮನೆಯೊಂದರಿಂದ ಮಗು ಚೀರಿದ ಶಬ್ಭದ ಕೇಳಿ ಬಂದಿದೆ. ಆರೋಪಿ ಬಾಗಿಲು ಹಾಕಿದ್ದ ಮನೆ ಒಡೆದು ಒಳ ಹೋದಾಗ ಆರೋಪಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾನೆ. ತಕ್ಷಣ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿ ಮಗುವನ್ನು ಮೈಸೂರು ಕೆಆರ್‌ಆಸ್ಪತ್ರೆಗೆ ಕರೆತಂದು ಪರೀಕ್ಷೆಗೆ ಒಳಪಡಿಸಿದರು. ಕೆಆರ್‌ಎಸ್ ಠಾಣೆಯ ಪಿಎಸ್‌ಐ ಬಸವರಾಜು ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಂಗ ಕಲಾವಿದ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ!
ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ: 16 ವರ್ಷದ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಹಾಗೂ 1.05 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮೈಸೂರು ತಾಲೂಕು ಜಯಪುರ ಹೋಬಳಿ ದೂರ ಗ್ರಾಮದ ಲೇ. ದೇವಯ್ಯ ಎಂಬವರ ಪುತ್ರ ಜಯರಾಮ ಶಿಕ್ಷೆಗೆ ಗುರಿಯಾದವ. ಈತನು ಕಳೆದ 2022ರ ಜೂ.6 ರಂದು ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಮೈಸೂರು ಗ್ರಾಮಾಂತರ ಹಿಂದಿನ ಇನ್ಸ್ ಪೆಕ್ಟರ್ ಸ್ವರ್ಣ ಅವರು ತನಿಖೆ ನಡೆಸಿ, ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪಡಿತರ ಅಕ್ಕಿ ಅಕ್ರಮ: ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ
ಈ ಪ್ರಕರದಣ ವಿಚಾರಣೆ ನಡೆಸಿದ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮ ಖರ್ಮೋಜ್ ಅವರು ಆರೋಪಿ ಜಯರಾಮ ವಿರುದ್ಧ ಆರೋಪ ಸಾಬೀತಾಗಿದೆ ಎಂದು 20 ವರ್ಷ ಕಠಿಣ ಸಜೆ ಹಾಗೂ 1.05 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದಲ್ಲಿ 75 ಸಾವಿರ ರೂ. ಪರಿಹಾರದ ರೂಪದಲ್ಲಿ ಬಾಲಕಿಗೆ ನೀಡಬೇಕು. ಹಾಗೂ ನೊಂದ ಬಾಲಕಿಯು 5 ಲಕ್ಷ ರೂ. ಪರಿಹಾರಕ್ಕೆ ಅರ್ಹಳು ಎಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ. ಜಯಂತಿ ವಾದಿಸಿದ್ದರು.