ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬೆಂಗಳೂರು (ಜ.14): ರಾಜ್ಯ ರಾಜಧಾನಿಯಲ್ಲಿ ದಾರುಣ ಘಟನೆ ನಡೆದಿದ್ದು, 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರ ವಲಯದ ಹೊಯ್ಸಳ ನಗರದ ವಿನಾಯಕ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಹಿಡಿದಿರುವ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ನೇಪಾಳ ಮೂಲದ ಕುಟುಂಬಕ್ಕೆ ಸೇರಿದ ಬಾಲಕಿಯಾಗಿದ್ದಾಳೆ. ಅದೇ ಕಟ್ಟಡದಲ್ಲಿ ಬಾಲಕಿಯ ತಂದೆ ಸೆಕ್ಯುರಿಟಿ ಗಾರ್ಡ್ ಆಗಿದ್ದ. ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯನ್ನ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಗರ್ಲ್‌ಫ್ರೆಂಡ್‌ನ ಗಂಡ, ತಂದೆಯನ್ನು ಕೊಲ್ಲಲು ಗ್ಯಾಂಗ್‌ಗೆ ಸುಪಾರಿ ಕೊಟ್ಟಿದ್ದ ವಕೀಲ, ಆದ್ರೆ ಕೊಲೆಯಾದವನೇ ಬೇರೆ!
ನಾಲ್ಕು ತಿಂಗಳಿನಿಂದ ನಡೆಯುತ್ತಿದ್ದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಬಾಲಕಿ ತಂದೆ-ತಾಯಿ ಕಟ್ಟಡ ಆರಂಭವಾದಗಲೇ ಬೆಂಗಳೂರಿಗೆ ಬಂದಿದ್ದರು. ವಿನಾಯಕ ಲೇಔಟ್ ನ ಮೊದಲ ಕ್ರಾಸ್ ನಿರ್ಮಾಣವಾಗುತ್ತಿರುವ ಕಟ್ಟಡ ಇದಾಗಿದೆ. ಬಾಲಕಿಯ ತಂದೆ ಇದೇ ಕಟ್ಟಡದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಕಳೆದ 5 ದಿನದ ಹಿಂದೆ ಈ ಕಟ್ಟಡ ಕಾಮಗಾರಿಗೆ ಬಂದಿದ್ದ ಎಂದು ಹೇಳಲಾಗಿದೆ.
Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!