* ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
* ಕಾಲು ನೋವಿನ ಬಾಧೆ ತಾಳದೆ ಆತ್ಮಹತ್ಯೆ
* ರಾಯಚೂರು ಜಿಲ್ಲೆ ಮಸ್ಕಿ ತಾ. ಇರಕಲ್ ಗ್ರಾಮದಲ್ಲಿ ಘಟನೆ..
ಮಸ್ಕಿ(ರಾಯಚೂರು), (ಮಾ.03): ನೇಣುಹಾಕಿಕೊಂಡು ಅಥವಾ ವಿಷ ಕುಡಿದು, ನದಿಗೋ, ಭಾವಿಗೋ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ.
ಹೌದು.. ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಲಕ್ಷಣ ಘಟನೆ ಜಿಲ್ಲೆಯ ಮಸ್ಕಿ (Maski) ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ. ಗ್ಯಾನಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
Dowry Harassment: ಗರ್ಭಿಣಿ ಪತ್ನಿಯನ್ನು ಸಿಗರೇಟ್‌ನಿಂದ ಸುಡ್ತಿದ್ದ ಕುಂದಾಪುರದ ಗಂಡ
ಕಳೆದ ಹಲವು ದಿನಗಳಿಂದ ಈತನಿಗೆ ಕಾಲು ನೋವು ಕಾಣಿಸಿಕೊಂಡಿತ್ತು. ಆಗ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ನೋವು ಕಡಿಮೆಯಾಗಿ ಬಳಿಕ ಕಾಲಿಗೆ ಗ್ಯಾಂಗ್‌ರಿನ್ ಉಂಟಾಗಿ ಕಾಲು ನೋವಿನ ಜತೆ ಕಾಲು ಸಹ ಕೊಳಯುತ್ತಾ ಬಂದಿದೆ.ಈ ಆರೋಗ್ಯ ಸಮಸ್ಯೆಗೆ ಹೆಚ್ಚಿನ ಹಣವನ್ನ ವ್ಯಯ ಮಾಡಲು ಸಾಧ್ಯವಾಗದ ಕಾರಣ ಮನೆಯಲ್ಲಿ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಕ್ರೂಡೈವರ್ ನಿಂದ ಚುಚ್ಚಿ ಪತ್ನಿ ಕೊಲೆ
ಕುಡಿದ ಮತ್ತಿನಲ್ಲಿ ಪತಿರಾಯನೊಮ್ಮ ಸ್ಕ್ರೂಡೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಹೆಬ್ಬೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ.
ಜಯಮ್ಮ (52) ಕೊಲೆಯಾದ ಮಹಿಳೆ. ನಾಗರಾಜ್ (58)ಕೊಲೆಗೈದ ಆರೋಪಿಯಾಗಿದ್ದು, ಪತ್ನಿಯನ್ನ ಕೊಲೆಗೈದು ಬಾತ್ ರೂಂ ಫಿಟ್ ನಲ್ಲಿ ಬಿಸಾಡಿದ್ದಾನೆ.
ನಾಗರಾಜ್ ಜಯಮ್ಮಳನ್ನ ಎರಡನೇ ಮದುವೆಯಾಗಿದ್ದ. ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವೇಳೆ ಸ್ಕ್ರೂಡೈವರ್ ನಿಂದ ಪತ್ನಿಗೆ ಮನಬಂದಂತೆ ಚುಚ್ಚಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ಮನೆ ಹಿಂಬದಿಯಿದ್ದ ಬಾತ್ ರೂಂ ಫಿಟ್ ಗೆ ಮೃತದೇಹ ಎಸೆದಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹವನ್ನ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುನಿಸಿಕೊಂಡು ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿರುವ ಇಲವಾಲದಿಂದ ವಾರದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನಾಗೇಶ್(17) ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಐ ಫೋನ್ (iPhone) ಖರೀದಿ ಮಾಡುವ ವಿಚಾರವಾಗಿ ಮನೆಯವರ ಜೊತೆ ಮುನಿಸಿಕೊಂಡಿದ್ದ ನಾಗೇಶ್ ತಾನೇ ಹಣ ಹೊಂದಿಸಿದ್ದ. ಆತ ಹೊಂದಿಸಿದ್ದ ಹಣಕ್ಕಾಗಿ ಸ್ನೇಹಿತರೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನಾಗೇಶ್ ಪೋಷಕರು ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿದ್ಯಾರ್ಥಿ ನಾಗೇಶ್ ಬಹಳ ದಿನದಿಂದ ಐ ಫೋನ್ ಖರೀದಿ ಮಾಡಬೇಕು ಎಂಬ ಆಸೆಯನ್ನು ಹೊಂದಿದ್ದ. ಈ ಬಗ್ಗೆ ಪೋಷಕರ ಬಳಿ ಕೇಳಿದಾಗ ಅಷ್ಟೊಂದು ಹಣದ ಫೋನ್ ಏಕೆ ಎಂದು ನಿರಾಕರಿಸಿದ್ದರು. ಹೀಗಾಗಿ ನಾಗೇಶ್ ಪೋಷಕರೊಂದಿಗೆ ಮುನಿಸಿಕೊಂಡಿದ್ದ. ಸದ್ಯ ತಾನೇ ಐ ಫೋನ್ ಖರೀದಿಸಲು ಹಣ ಹೊಂದಿಸುತ್ತಿದ್ದ. ಆದ್ರೆ ವಾರದ ಹಿಂದೆ ಏಕಾಏಕಿ ನಾಗೇಶ್ ನಾಪತ್ತೆಯಾಗಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಲಾಗಿತ್ತು. ಆದ್ರೆ ಇಂದು ವಿದ್ಯಾರ್ಥಿ ನಾಗೇಶ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಸಂಬಂಧ ಪೋಷಕರು ನಾಗೇಶ್ ಹೊಂದಿಸಿದ್ದ ಹಣಕ್ಕಾಗಿ ಸ್ನೇಹಿತರೇ ಕೊಲೆ ಮಾಡಿರಬೇಕು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.