ಕಲಬುರಗಿ: 6 ವರ್ಷದ ಬಾಲಕಿ ಮೇಲೆ 60ರ ವೃದ್ಧನಿಂದ ಅತ್ಯಾಚಾರ

Published : Aug 27, 2023, 09:44 PM IST
ಕಲಬುರಗಿ: 6 ವರ್ಷದ  ಬಾಲಕಿ ಮೇಲೆ 60ರ ವೃದ್ಧನಿಂದ ಅತ್ಯಾಚಾರ

ಸಾರಾಂಶ

ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧ ಮೌಲಾ ಅತ್ಯಾಚಾರ ಮಾಡಿದ್ದಾನೆಂಬ ಸುದ್ದಿ ಕಾಳ್ಗಿಚ್ಚಿನಂತೆ ಪಟ್ಟಣದಲ್ಲಿ ಹರಿದಾಡುತ್ತಿದ್ದಂತೆ ನಾಗರಿಕರು ಆಕ್ರೋಶ ಹೊರಹಾಕಿ ಠಾಣೆಯ ಮುಂದೆ ಜಮಾಯಿಸಿದ್ದರು. ಈ ಹಿಂದೆಯೂ ಆರೋಪಿಯು ಎರಡ್ಮೂರು ಬಾರಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ, ಆದರೆ ಇಂದು ರೈಡ್‌ಹ್ಯಾಂಡಾಗಿ ಆರೋಪಿಯನ್ನು ಗುರುತಿಸಲಾಗಿದೆ ಎಂದು ಠಾಣೆಯ ಮುಂದೆ ನೆರೆ ಹೊರೆಯವರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಆಳಂದ(ಆ.27):  ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಚಾಕ್ಲೇಟ್‌ ಕೊಡೋದಾಗಿ ಕರೆದು ಅವಳ ಮೇಲೆ 60 ವಷÜರ್‍ದ ವೃದ್ಧನು ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಮೇಲೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಆರೋಪಿ ವೃದ್ಧ ಮೌಲಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧ ಮೌಲಾ ಅತ್ಯಾಚಾರ ಮಾಡಿದ್ದಾನೆಂಬ ಸುದ್ದಿ ಕಾಳ್ಗಿಚ್ಚಿನಂತೆ ಪಟ್ಟಣದಲ್ಲಿ ಹರಿದಾಡುತ್ತಿದ್ದಂತೆ ನಾಗರಿಕರು ಆಕ್ರೋಶ ಹೊರಹಾಕಿ ಠಾಣೆಯ ಮುಂದೆ ಜಮಾಯಿಸಿದ್ದರು. ಈ ಹಿಂದೆಯೂ ಆರೋಪಿಯು ಎರಡ್ಮೂರು ಬಾರಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ, ಆದರೆ ಇಂದು ರೈಡ್‌ಹ್ಯಾಂಡಾಗಿ ಆರೋಪಿಯನ್ನು ಗುರುತಿಸಲಾಗಿದೆ ಎಂದು ಠಾಣೆಯ ಮುಂದೆ ನೆರೆ ಹೊರೆಯವರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅತ್ಯಾಚಾರ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ದಾವಣಗೆರೆ ಪೊಲೀಸರು

ಬಾಲಕಿ ಹೇಳಿಕೆ ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌ ಅವರು ಠಾಣೆಗೆಗೆ ಭೇಟಿ ನೀಡಿ ಉದ್ರಿಕ್ತ ಪರಿಸ್ಥಿತಿಯನ್ನು ತಿಳಿಗೊಳಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಪೊಲೀಸ್‌ ಠಾಣೆಗೆ ಆಗಮಿಸಿದ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಹರ್ಷಾನಂದ ಗುತ್ತೇದಾರ, ತಾಲೂಕಿನಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ ಹೀಗಾಗಿ ಪೊಲೀಸರು ಕಾಮುಕರಿಗೆ ತಕ್ಕ ಪಾಠ ಕಲಿಸಬೇಕು ಮತ್ತು ಇಂಥ ಘಟನೆ ಮರುಕಳಿಸಿದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.

ಮರುಕಳಿಸಿದ ಘಟನೆ:

ತಾಲೂಕಿನಲ್ಲಿ ಒಂದುವರೆ ವರ್ಷದಲ್ಲೇ ಇಬ್ಬರು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಕೊಲೆ ಘಟನೆ ಮತ್ತು ವೃದ್ಧೆಯೊಬ್ಬರ ಮೇಲೆ ನಡೆದ ಬಲತ್ಕಾರ ಹೀಗೆ ಮೂರು ಅಹಿತಕರ ಘಟನೆ ಮಾಸುವ ಮುನ್ನವೇ ಸ್ಥಳೀಯ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿರುವುದು ನಾಗರಿಕರನ್ನು ಕಂಗಾಲಾಗಿಸಿದೆ.

ಅನಾಥ ಬಾಲಕಿ ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್‌ ಮಾಡಿದ 8 ಜನ ಕಾಮುಕರು!

ಈ ಕುರಿತು ಘಟನೆಯನ್ನು ಖಂಡಿಸಿದ ನಾಗರಿಕರು ಆರೋಪಿಯನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಡಾವಣೆಯ ನಾಗರಿಕರು ಸೇರಿ ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಎಸ್‌. ಗುತ್ತೇದಾರ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ತೆರಳಿದ ಜನರು ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ರೀತಿ ಐದಾರು ಬಾರಿ ಮಾಡಿದ್ದು, ರೈಡ್‌ಹ್ಯಾಂಡಾಗಿ ಹಿಡಿದು ಠಾಣೆಗೆ ದೂರು ಕೊಟ್ಟಿದ್ದಾರೆ. ಇಂಥ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಇಂಥ ಘಟನೆ ಮರುಕಳುಸಿದಂತೆ ಮುನ್ನೆಚ್ಚರಿಕೆ ವಹಿಸಿ ಹೆಣ್ಣು ಮಕ್ಕಳಿಗೆ ಸುರಕ್ಷಿತೆ ಕಾಪಾಡಬೇಕು. ತಪ್ಪಿತಸ್ಥ ಆರೋಪಿ ಯಾವುದೇ ಜಾತಿ ಧರ್ಮದವನಾಗಿರಲಿ, ತಕ್ಷಣವೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹರ್ಷಾನಂದ ಗುತ್ತೇದಾರ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಗುಂಡು ಗೌಳಿ, ಪುರಸಭೆ ಸದಸ್ಯ ಶಿವುಪುತ್ರ ನಡಗೇರಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!