70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತುಮಕೂರು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವೃದ್ಧೆಯ ಅಳಿಯನ ಸ್ನೇಹಿತರಿಂದಲೇ ಈ ಕೃತ್ಯ ನಡೆದಿದೆ.
ತುಮಕೂರು (ಮೇ.28): 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತುಮಕೂರು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆಯ ಅಳಿಯನ ಸ್ನೇಹಿತರಿಂದಲೇ ಈ ಕೃತ್ಯ ನಡೆದಿದೆ. ಅತ್ಯಾಚಾರವೆಸಗಿ ಆರೋಪಿಗಳು ಪರಾರಿಯಾಗಿದ್ದಾರೆ. ಮೊಮ್ಮಗಳ ವಿವಾಹ ಕಾರ್ಯಕ್ರಮಕ್ಕೆ ಬಂದ ಅಳಿಯನ ಸ್ನೇಹಿತರಿಬ್ಬರಿಂದ ಈ ಕೃತ್ಯ ನಡೆದಿದೆ. ಎಣ್ಣೆ ಪಾರ್ಟಿ ಮಾಡಿ ಬಳಿಕ ಅಳಿಯ ಮಲಗಿದ್ದ ಸಮಯದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಅಸ್ವಸ್ಥೆಯಾಗಿದ್ದ ವೃದ್ಧೆಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ್ ಮತ್ತು ರಾಜೇಶ ಎಂಬುವರ ವಿರುದ್ಧ ದೂರು ದಾಖಲು ದಾಖಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸಿಂಧನೂರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮಾರಣಾಂತಿಕ ಹಲ್ಲೆ, ಸಾವು
ರಾಯಚೂರು: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಏಳಮೈಲ್ ಕ್ಯಾಂಪಿನ ನಿವಾಸಿಯಾಗಿರುವ ಮಹಿಳೆಯನ್ನು ಮೂರುಮೈಲ್ ಕ್ಯಾಂಪಿನ ಮಾಳಪ್ಪ ಕುರುಬರು ಸೇರಿದಂತೆ ನಾಲ್ವರು ಕಳೆದ 24ರಂದು ಸಂಜೆ 5 ಗಂಟೆ ಸುಮಾರಿಗೆ ನಾಲ್ಕುಮೈಲ್ ಕ್ಯಾಂಪಿನ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಮಹಿಳೆ ಅವರನ್ನು ತಡೆಯಲೆತ್ನಿಸಿದಾಗ ಆಕೆ ಮೇಲೆ ಮನಸೋ ಇಚ್ಛೆ ಹಲ್ಲೆ ಎಸಗಿ ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.
ನಂತರ ಆಕೆಯನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್‌ನಲ್ಲಿ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿಯೇ ಪೊಲೀಸರಿಗೆ ನಡೆದ ಘಟನೆಯನ್ನು ವಿವರಿಸಿರುವ ನೊಂದ ಮಹಿಳೆ ನಂತರ ಸಾವನಪ್ಪಿದ್ದಾಳೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿ ಮಾಳಪ್ಪನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರವಿಕುಮಾರ ಕಪ್ಪತ್‌ನವರ್ ತಿಳಿಸಿದ್ದಾರೆ.
ತಾಲೂಕಿನ ಏಳಮೈಲ್ ಕ್ಯಾಂಪ್ ನಿವಾಸಿಯಾಗಿರುವ ಮಹಿಳೆಯ ಮೇಲೆ ಮಾಳಪ್ಪ ಕುರುಬ ಸೇರಿ ನಾಲ್ವರು ಮೇ 24ರ ಸಂಜೆ 5ರ ಸುಮಾರಿಗೆ ಅತ್ಯಾಚಾರಕ್ಕೆ ನಡೆಸಿದ್ದಾರೆ. ಆಕೆ ಮೇಲೆ ಮನಸೋ ಇಚ್ಛೆ ಹಲ್ಲೆ ಎಸಗಿ ಸ್ಥಳದಲ್ಲೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿದ್ದ ಆಕೆಯನ್ನು ಗಮನಿಸಿದ ಗ್ರಾಮಸ್ಥರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್‌ನಲ್ಲಿ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲೇ ಪೊಲೀಸರಿಗೆ ನಡೆದ ಘಟನೆಯನ್ನು ವಿವರಿಸಿರುವ ಮಹಿಳೆ ನಂತರ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.
Bengaluru: ಒಂಟಿ ಮಹಿಳೆಯ ಕೈ-ಕಾಲು ಕಟ್ಟಿ ಉಸಿರು ಗಟ್ಟಿಸಿ ಹತ್ಯೆ, ಮನೆ ದರೋಡೆ!
ಮಹಿಳೆಯೊಬ್ಬರ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆಗೈದಿರುವ ಘಟನೆ ಖಂಡನೀಯವಾಗಿದ್ದು, ಕೂಡಲೇ ಪೋಲಿಸರು ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸಿಪಿಐ (ಎಂಎಲ್) ರೆಡ್‌ಸ್ಟಾರ್ ಪಕ್ಷ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ್ ಒತ್ತಾಯಿಸಿದ್ದಾರೆ.
WHALE VOMIT SMUGGLING: 3.5 ಕೋಟಿ ಮೌಲ್ಯದ ಅಂಬರ್ಗ್ರಿಸ್ ಸಾಗಿಸುತ್ತಿದ್ದವರು ಚಾಮರಾಜನಗರದಲ್ಲಿ ಅರೆಸ್ಟ್
ಈ ಸಂಬಂಧ ಶನಿವಾರ ಹೇಳಿಕೆ ನೀಡಿರುವ ಅವರು, ಸಿಂಧನೂರಿನ ಏಳಮೈಲ್ ಕ್ಯಾಂಪಿನಲ್ಲಿ ವಾಸಿಸುತ್ತಿದ್ದ ಮಹಿಳೆ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ನಾಲ್ವರು ಕಾಮುಕ ಆರೋಪಿಗಳ ಪೈಕಿ, ಒಬ್ಬನನ್ನು ಪೊಲೀಸರು ಬಂಧಿಸಿದ್ದು ಉಳಿದ ಮೂರು ಜನರನ್ನು ತಕ್ಷಣ ಬಂಧಿಸಬೇಕು. ತಾಲೂಕಿನ ಅನತಿ ದೂರದಲ್ಲಿ ನಡೆದಿರುವ ಅತ್ಯಾಚಾರ ಕೊಲೆ ಘಟನೆ ಮಾನವ ಕುಲ ತಲೆ ತಗ್ಗಿಸುವಂತ ಘಟನೆಯಾಗಿದೆ. ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಿ, ಸಾವಿಗೀಡಾದ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರ ರು.1 ಕೋಟಿ ಪರಿಹಾರ ನೀಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.