ಕೋಲಾರ: ಕಾಂಗ್ರೆಸ್‌ ಮುಖಂಡನ ಬರ್ಬರ ಕೊಲೆ, 8 ಮಂದಿ ಬಂಧನ

Published : Oct 25, 2023, 07:30 AM IST
ಕೋಲಾರ: ಕಾಂಗ್ರೆಸ್‌ ಮುಖಂಡನ ಬರ್ಬರ ಕೊಲೆ, 8 ಮಂದಿ ಬಂಧನ

ಸಾರಾಂಶ

ಬಂಧಿತ ಪ್ರಮುಖ ಆರೋಪಿ ವೇಣುಗೋಪಾಲ್ ಮತ್ತು ಶ್ರೀನಿವಾಸನ್ ಮಧ್ಯೆ ಹತ್ತು ವರ್ಷಗಳಿಂದ ವೈಷಮ್ಯ ಇತ್ತು. ಆರೋಪಿ ವೇಣುಗೋಪಾಲ್ ಮನೆಗೆ ಬೆಂಕಿ ಇಟ್ಟು ಸುಡಲಾಗಿತ್ತು. ಆಗ ಶ್ರೀನಿವಾಸನ್ ರವರ ಬೆಂಬಲಿಗರು ಕೃತ್ಯ ನಡೆಸಿದ್ದರು ಎಂದು ಶ್ರೀನಿವಾಸನ್ ಸೇರಿ ಅವರ ಬೆಂಬಲಿಗರ ಮೇಲೆ ಕೇಸು ದಾಖಲಾಗಿತ್ತು. ಇದಲ್ಲದೆ ಆಗಾಗ ಇಬ್ಬರ ಮಧ್ಯೆಯೂ ಜಗಳ ನಡೆಯುತ್ತಿದ್ದವಲ್ಲದೆ ಪ್ರಕರಣಗಳು ದಾಖಲಾಗುತ್ತಿದ್ದವು.

ಕೋಲಾರ(ಅ.25):  ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸನ್ ರನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಕಾರ್ಯಾಚರಣೆ ವೇಳೆ ಪೊಲೀಸರು ಮೂವರು ಆರೋಪಿಗಳ ಮೇಲೆ ಗುಂಡು ಹಾರಿಸಿ, ಒಟ್ಟು 8 ಮಂದಿಯನ್ನು ಬಂಧಿಸಿದ್ದಾರೆ.

ಗೃಹ ಮಂತ್ರಿ ಜಿ.ಪರಮೇಶ್ವರ್ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಆಪ್ತರಾಗಿದ್ದ ಶ್ರೀನಿವಾಸನ್‌ ಸೋಮವಾರ ಬೆಳಗ್ಗೆ ೧೧.೩೦ರ ಸಂದರ್ಭದಲ್ಲಿ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಮುಳಬಾಗಿಲು ರಸ್ತೆಯ ಅವರ ತೋಟದ ಕೆಲಸ ಮಾಡಿಸುತ್ತಿದ್ದ ಸಂದರ್ಭದಲ್ಲಿ 6 ಮಂದಿ ಪರಿಚಿತರು ಆಗಮಿಸಿ ಥ್ಯಾಂಕ್ ಯು ಅಂಕಲ್ ಎಂದು ಹೇಳಿ, ಮುಖಕ್ಕೆ ಮೂರ್ಛೆ ತರಿಸುವಂತಹ ರಾಸಾಯನಿಕ ಎರಚಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ಜೊತೆಯಲ್ಲಿದ್ದ ಚಾಲಕ ಅಮರ್ ಮತ್ತು ಕಾವಲುಗಾರ ಕೃಷ್ಣ ಭಯಗೊಂಡು ಪರಾರಿಯಾಗಿದ್ದರು.

ಹಾಡಹಗಲೇ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಆಪ್ತನನ್ನು ಅಟ್ಟಾಡಿಸಿ ಕೊಲೆಗೈದ ದುಷ್ಕರ್ಮಿಗಳು

ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ವೇಣುಗೋಪಾಲ್ ಮತ್ತು ಶ್ರೀನಿವಾಸನ್ ಮಧ್ಯೆ ಹತ್ತು ವರ್ಷಗಳಿಂದ ವೈಷಮ್ಯ ಇತ್ತು. ಆರೋಪಿ ವೇಣುಗೋಪಾಲ್ ಮನೆಗೆ ಬೆಂಕಿ ಇಟ್ಟು ಸುಡಲಾಗಿತ್ತು. ಆಗ ಶ್ರೀನಿವಾಸನ್ ರವರ ಬೆಂಬಲಿಗರು ಕೃತ್ಯ ನಡೆಸಿದ್ದರು ಎಂದು ಶ್ರೀನಿವಾಸನ್ ಸೇರಿ ಅವರ ಬೆಂಬಲಿಗರ ಮೇಲೆ ಕೇಸು ದಾಖಲಾಗಿತ್ತು. ಇದಲ್ಲದೆ ಆಗಾಗ ಇಬ್ಬರ ಮಧ್ಯೆಯೂ ಜಗಳ ನಡೆಯುತ್ತಿದ್ದವಲ್ಲದೆ ಪ್ರಕರಣಗಳು ದಾಖಲಾಗುತ್ತಿದ್ದವು.

ಮುಳಬಾಗಿಲು ರಸ್ತೆಯ ಲಕ್ಷ್ಮೀಸಾಗರ ಅರಣ್ಯದಲ್ಲಿ ಅವಿತಿದ್ದ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಆರೋಪಿಗಳು ಪೋಲಿಸರ ಮೇಲೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಪ್ರಮುಖ ಆರೋಪಿ ವೇಣುಗೋಪಾಲ್ ಮತ್ತು ಇತರ ಮೂವರು ಆರೋಪಿಗಳ ಮೇಲೆ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಶ್ ಗುಂಡು ಹಾರಿಸಿ ಬಂಧಿಸಿದ್ದಾರೆ. ಕಲ್ಲೇಟಿನಿಂದ ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡೇಟು ತಗುಲಿದ ಮೂವರು ಆರೋಪಿಗಳನ್ನು ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಮಧ್ಯಾಹ್ನದ ಒಳಗಾಗಿ ೮ ಆರೋಪಿಗಳನ್ನೂ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ