
ಧಾರವಾಡ(ಮೇ.29): ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಜಮೀನಿನಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ ಎಂಬ ವೃದ್ಧೆಯನ್ನು ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ಅವಳ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿಯಾಗಿದ್ದಾರೆ.
ಉದ್ಯಮಿ ಸೇರಿ ಜೋಡಿ ಕೊಲೆಗೆ ಬೆಚ್ಚಿ ಬಿದ್ದ ಧಾರವಾಡ, ರೌಡಿ ಶೀಟರ್ ಪುತ್ರ ಸೇರಿ 4 ಮಂದಿ ಅರೆಸ್ಟ್
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ಶ್ವಾನದಳವನ್ನು ಕರೆಯಿಸಿ ಕೊಲೆಗಾರರ ಪತ್ತೆಗೆ ಮುಂದಾಗಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ