ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಪ್ರಾಣ ಕಳೆದುಕೊಂಡ 9 ವಿದ್ಯಾರ್ಥಿಗಳು; ಮತ್ತಿಬ್ಬರಿಂದ ಆತ್ಮಹತ್ಯೆಗೆ ಯತ್ನ

Published : Apr 29, 2023, 03:35 PM ISTUpdated : May 11, 2023, 07:23 PM IST
ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಪ್ರಾಣ ಕಳೆದುಕೊಂಡ 9 ವಿದ್ಯಾರ್ಥಿಗಳು; ಮತ್ತಿಬ್ಬರಿಂದ ಆತ್ಮಹತ್ಯೆಗೆ ಯತ್ನ

ಸಾರಾಂಶ

ಆಂಧ್ರ ಪ್ರದೇಶದ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 11ನೇ ತರಗತಿಯಲ್ಲಿ ಶೇ 61ರಷ್ಟು ಮಂದಿ ಉತ್ತೀರ್ಣರಾಗಿದ್ದರೆ, 12ನೇ ತರಗತಿಯಲ್ಲಿ ಶೇ 72ರಷ್ಟು ಫಲಿತಾಂಶ ಬಂದಿದೆ. 

ಹೈದರಾಬಾದ್ (ಏಪ್ರಿಲ್ 29, 2023): ಆಂಧ್ರಪ್ರದೇಶದ ಮಧ್ಯಂತರ ಪರೀಕ್ಷಾ ಮಂಡಳಿಯು ಬುಧವಾರ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಆಂಧ್ರಪ್ರದೇಶದಲ್ಲಿ ಕನಿಷ್ಠ 9 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಇನ್ನಿಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 11ನೇ ತರಗತಿಯಲ್ಲಿ ಶೇ 61ರಷ್ಟು ಮಂದಿ ಉತ್ತೀರ್ಣರಾಗಿದ್ದರೆ, 12ನೇ ತರಗತಿಯಲ್ಲಿ ಶೇ 72ರಷ್ಟು ಫಲಿತಾಂಶ ಬಂದಿದೆ. 

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ 17 ವರ್ಷದ ಬಾಲಕ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ. ಇನ್ನು, ಜಿಲ್ಲೆಯ ದಂಡು ಗೋಪಾಲಪುರಂ ಗ್ರಾಮದವರಾದ ಇಂಟರ್‌ಮೀಡಿಯೇಟ್‌ ಪ್ರಥಮ ವರ್ಷದ ವಿದ್ಯಾರ್ಥಿ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ.

ಇದನ್ನು ಓದಿ: ನಿದ್ರೆ ಹಾಳು ಮಾಡಿದ್ದಕ್ಕೆ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ ಪಾಪಿ!

ಹಾಗೆ, ಮಲ್ಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿನಾಧಪುರಂನಲ್ಲಿರುವ ತನ್ನ ನಿವಾಸದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ವಿಶಾಖಪಟ್ಟಣಂ ಜಿಲ್ಲೆಯವಳು ಮತ್ತು ಇಂಟರ್‌ಮೀಡಿಯೇಟ್‌ ಮೊದಲ ವರ್ಷದ ಕೆಲವು ವಿಷಯಗಳಲ್ಲಿ ಅನುತ್ತೀರ್ಣಳಾದ ನಂತರ ಅಸಮಾಧಾನಗೊಂಡಿದ್ದಳು ಎಂದು ವರದಿಯಾಗಿದೆ.

ಅಲ್ಲದೆ, 18 ವರ್ಷದ ಯುವಕ ವಿಶಾಖಪಟ್ಟಣಂನ ಕಂಚರಪಾಲೆಂ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ತನ್ನ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾನೆ.. ಅವನು ದ್ವಿತೀಯ ವರ್ಷದ ಮಧ್ಯಂತರ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದ.

ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ನ ಮತ್ತಷ್ಟು ರಹಸ್ಯ ಬಯಲು: ಅತೀಕ್‌ ಕಚೇರಿಯಲ್ಲಿ ರಕ್ತಸಿಕ್ತ ಚಾಕು, ರಕ್ತದ ಕಲೆಯ ದುಪ್ಪಟ್ಟಾ ಪತ್ತೆ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಇಬ್ಬರು 17 ವರ್ಷದ ವಿದ್ಯಾರ್ಥಿಗಳು ಎಪಿ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಅದೇ ಜಿಲ್ಲೆಯಲ್ಲಿ ಬಾಲಕನೊಬ್ಬ ಕೀಟನಾಶಕ ಸೇವಿಸಿ ಮೃತಪಟ್ಟಿದ್ದಾನೆ ಎಂದು ತಿಳಿದುಕೊಂಡಿದೆ. ಮತ್ತೊಬ್ಬ 17 ವರ್ಷದ ವಿದ್ಯಾರ್ಥಿ ಅನಕಾಪಲ್ಲಿಯಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂಟರ್ ಮೀಡಿಯೇಟ್ ಮೊದಲ ವರ್ಷದಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕಾಗಿ ಆತ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಭಾರತದ ಪ್ರೀಮಿಯರ್ ಕಾಲೇಜುಗಳಲ್ಲಿ ಆತ್ಮಹತ್ಯೆಗಳ ಸರಣಿಯ ನಡುವೆ ಆಘಾತಕಾರಿ ಸುದ್ದಿ ಬಂದಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ) ವಿವಿಧ ಕ್ಯಾಂಪಸ್‌ಗಳಲ್ಲಿ ಈ ವರ್ಷ ನಾಲ್ಕು ವಿದ್ಯಾರ್ಥಿಗಳು ಶಂಕಿತ ಆತ್ಮಹತ್ಯೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್‌: ‘ಕೈ’ ನಾಯಕ ಶ್ರೀನಿವಾಸ್‌ ವಿರುದ್ಧ ಎಫ್‌ಐಆರ್‌; ಅಸ್ಸಾಂ ಪೊಲೀಸರಿಂದ ಬಂಧನ ಸಾಧ್ಯತೆ

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಫೆಬ್ರವರಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದರು. ವಿದ್ಯಾರ್ಥಿಗಳು ಬಲವಂತವಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದು,  ನಮ್ಮ ಸಂಸ್ಥೆಗಳು ಎಲ್ಲಿ ತಪ್ಪಾಗುತ್ತಿವೆ ಎಂದು ಆಶ್ಚರ್ಯ ಪಡುತ್ತಿದ್ದೇನೆ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದರು. 

ಇದನ್ನೂ ಓದಿ: ಕತ್ತು ಹಿಸುಕಿ ಪ್ರೇಮಿಯ ಕೊಲೆ: ಸೋದರಿ ಸಹಾಯದಿಂದ ಶವವನ್ನು 12 ಕಿ.ಮೀ. ದೂರ ಎಸೆದ ಪಾಪಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ