ಮೂರು ವರ್ಷದ ಜೈಲು ಶಿಕ್ಷೆಯೊಂದಿಗೆ ಕೋರ್ಟ್ ಮುದುಕನಿಗೆ 3 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ. ಹಾಗೇನಾದರೂ ಮೂರು ಸಾವಿರ ರೂಪಾಯಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 6 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಕೋರ್ಟ್ ಹೇಳಿದೆ.
ಭುವನೇಶ್ವರ (ನ.3): 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 92 ವರ್ಷದ ವ್ಯಕ್ತಿಗೆ ಒಡಿಶಾದ ಕೇಂದ್ರಪಾಡಾ ಜಿಲ್ಲೆಯ ನ್ಯಾಯಾಲಯವು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಮೂರು ವರ್ಷಗಳ ಹಿಂದೆ ಬಾಲಕಿಗೆ ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದಲ್ಲಿ ವೃದ್ಧ ಆರೋಪಿಯಾಗಿದ್ದಾನೆ. ಹೆಚ್ಚುವರಿ ಕೇಂದ್ರಪಾಡಾ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ತ್ರಿದಿಕ್ರಮ್ ಕೇಶರಿ ಛಿಹರಾ ಮಂಗಳವಾರ ತೀರ್ಪು ಪ್ರಕಟಿಸಿದರು. ನ್ಯಾಯಾಲಯವು ಅಪರಾಧಿಗೆ 3,000 ರೂಪಾಯಿ ದಂಡವನ್ನು ಕೂಡ ವಿಧಿಸಿದೆ. ಹಾಗೇನಾದರೂ ಮೊತ್ತವನ್ನು ಪಾವತಿಸಲು ವಿಫಲವಾದರೆ, ಅವರು ಆರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. 2019 ರ ಜನವರಿ 26 ರಂದು ಮರ್ಷಘೈ ಪ್ರದೇಶದ ಹಳ್ಳಿಯೊಂದರಲ್ಲಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಅಪರಾಧಿ ಬಾಲಕಿಗೆ ಕಿರುಕುಳ ನೀಡಿದ್ದ ಎಂದು ಹೇಳಲಾಗಿದೆ. ಅದೇ ವೇಳೆ ಬಾಲಕಿಗೆ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ. ಆದರೆ, ಘಟನೆಯ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು, ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ವೃದ್ಧನ ವಿರುದ್ಧ ದೂರು ದಾಖಲಿಸಿದ್ದಳು. ಬಳಿಕ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದರು.
ಎಫ್‌ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿತ್ತು ಮತ್ತು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮನೋಜ್ ಕುಮಾರ್ ಸಾಹು ತಿಳಿಸಿದ್ದಾರೆ.
ಚುಂಬನ, ಮುದ್ದಾಟ ಅಸ್ವಾಭಾವಿಕ ಅಪರಾಧವಲ್ಲ ಎಂದ ಹೈಕೋರ್ಟ್!
ಶಿಕ್ಷಕನಿಂದಲೇ ಅಪ್ರಾಪ್ತ ಬಾಲಕಿಗೆ ಕಿರುಕುಳ: ಇನ್ನು ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಗುರು-ಶಿಷ್ಯರ ಸಂಬಂಧಕ್ಕೆ ಕಳಂಕ ತರುವ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಶ್ಲೀಲ ಕೃತ್ಯ ಎಸಗಿದ್ದಾನೆ.
Police abuse Women: ಸಂತ್ರಸ್ತೆಯ ತಾಯಿಯನ್ನೇ ಬೆತ್ತಲಾಗಲು ಹೇಳಿದ, ಪೊಲೀಸ್ ಕಾಮಪುರಾಣ
ಈ ವಿಷಯವನ್ನು ಯಾರಿಗೂ ಹೇಳಬೇಡ ಎಂದು ಆರೋಪಿ, ವಿದ್ಯಾರ್ಥಿಗೆ ಹತ್ತು ರೂಪಾಯಿ ಹಾಗೂ ಸಿಹಿತಿಂಡಿ ನೀಡಿ ಸುಮ್ಮನಾಗುವಂತೆ ಹೇಳಿದ್ದರು. ಬಳಿಕ ಶಿಕ್ಷಕನ ಈ ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಾಳೆ. ಇದರಿಂದ ಮನೆಯವರು ಶಾಲೆಯಲ್ಲಿ ಗಲಾಟೆ ಎಬ್ಬಿಸಿದ್ದಾರೆ. ತನಿಖೆಯಲ್ಲಿ ಆರೋಪ ನಿಜವೆಂದು ಕಂಡುಬಂದ ನಂತರ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.