ನವದೆಹಲಿ: 4ನೇ ಕ್ಲಾಸ್‌ನಲ್ಲಿ ಓದುತ್ತಿದ್ದ 11 ವರ್ಷದ ಬಾಲಕನೋರ್ವ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಬೆಚ್ಚಿ ಬೀಳಿಸುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಈ ತಲೆಮಾರಿನ ಪೋಷಕರಲ್ಲಿ ಆಘಾತ ಹೆಚ್ಚಿಸಿದೆ. ಬಾಲಕಿ ಸಂಜೆಯ ಟ್ಯೂಷನ್ ಕ್ಲಾಸ್‌ಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಆಗ್ರಾ ಪೊಲೀಸರು ಹೇಳಿದ್ದಾರೆ. ಬಾಲಕಿಗೆ ಪರಿಚಿತನಾಗಿದ್ದ ಬಾಲಕನೇ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಘಟನೆಯ ಬಳಿಕ 6 ವರ್ಷದ ಮಗು ರಕ್ತಸ್ರಾವದೊಂದಿಗೆ ಮನೆಗೆ ಮರಳಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕೃತ್ಯವೆಸಗಿದ ಬಾಲಕನ್ನು ಪೊಲೀಸರು ಬಂಧಿಸಿದ್ದು, ಆತನನ್ನು ಬಾಲಾಪರಾಧಿ ಮನೆಗೆ ಕಳುಹಿಸಲಾಗಿದೆ.
ವರದಿಯ ಪ್ರಕಾರ ಏಪ್ರಿಲ್ 8 ರಂದು ಈ ಘಟನೆ ನಡೆದಿದೆ. ಘಟನೆಯ ಬಳಿಕ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಹಾಗೂ ಬಾಲಕ ಇಬ್ಬರೂ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ಇನ್ನೂ ದಾಖಲಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಇಟ್ಮಾದಪುರದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿ ಟ್ಯೂಷನ್ ಕ್ಲಾಸ್‌ಗೆ ತೆರಳಿದ ವೇಳೆ ಈ ಘಟನೆ ನಡೆದಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 9 ವರ್ಷದ ಬಾಲಕನಿಂದ 9 ವರ್ಷದ ಬಾಲಕಿಯ ರೇಪ್!
ನಾನು ಸಂಜೆ 7.30ರ ಸುಮಾರಿಗೆ ಮನೆಗೆ ಹೋದಾಗ ಬಾಲಕಿಗೆ ರಕ್ತಸ್ರಾವವಾಗುತ್ತಿದ್ದು, ತನಗೆ ಏನಾಯ್ತು ಎಂಬುದನ್ನು ಆಕೆ ಪೋಷಕರಿಗೆ ಹೇಳಿದ್ದಾಳೆ. ಅಲ್ಲದೇ ಆರೋಪಿ ಬಾಲಕನ ಆಕೆಗೆ ಗೊತ್ತಿರುವವನೇ ಆಗಿದ್ದಾನೆ. ನಂತರ ನಾವು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದೆವು ಹಾಗೂ ಬಾಲಕ ಮನೆಗೆ ಹೋಗಿ ಬಾಲಕನನ್ನು ಪೊಲೀಸರಿಗೆ ಹಸ್ತಾಂತರಿಸಿದ್ದೇವೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.
ಡಿಸಿಪಿ ಸೋನಮ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿದೆ. ಎಸ್‌ಎನ್ ಮೆಡಿಕಲ್ ಕಾಲೇಜಿನ ವೈದ್ಯರು ಆಕೆಗೆ ತಪಾಸಣೆ ನಡೆಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರವಾಗಿದ್ದು, ಧೃಡಪಟ್ಟಿದೆ. ಆರೋಪಿ ಬಾಲಕನ್ನು ಬಂಧಿಸಿ ಬಾಲಾಪರಾಧಿ ಮನೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಪ್ರಭಾವ, 7 ವರ್ಷದ ಬಾಲಕನಿಂದ 5 ವರ್ಷದ ಬಾಲಕಿಯ ರೇಪ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ