ಡ್ರಾಪ್ ನೀಡೋದಾಗಿ ಕರೆದೊಯ್ದು 38 ವರ್ಷದ ಕಾಮುಕನಿಂದ 68 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

Published : Dec 20, 2023, 12:20 PM IST
ಡ್ರಾಪ್ ನೀಡೋದಾಗಿ ಕರೆದೊಯ್ದು 38 ವರ್ಷದ ಕಾಮುಕನಿಂದ 68 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

ಸಾರಾಂಶ

38 ವರ್ಷದ ಕಾಮುಕನೋರ್ವ 68 ವರ್ಷದ ವೃದ್ಧೆಯ ಮೇಲೆ ಆಕೆಯ ಮನೆಯಲ್ಲೇ ಅತ್ಯಾಚಾರವೆಸಗಿ ಆಕೆಯ ಮೇಲೆ ಅಮಾನುಷ ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 38 ವರ್ಷದ ಕಾಮುಕನನ್ನು ಬಂಧಿಸಿದ್ದಾರೆ. 

ಮುಂಬೈ: 38 ವರ್ಷದ ಕಾಮುಕನೋರ್ವ 68 ವರ್ಷದ ವೃದ್ಧೆಯ ಮೇಲೆ ಆಕೆಯ ಮನೆಯಲ್ಲೇ ಅತ್ಯಾಚಾರವೆಸಗಿ ಆಕೆಯ ಮೇಲೆ ಅಮಾನುಷ ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 38 ವರ್ಷದ ಕಾಮುಕನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಈ ಹಿಂದೆಯೂ ಲೈಂಗಿಕ ಕಿರುಕುಳವೆಸಗಿದ ಪ್ರಕರಣ ದಾಖಲಾಗಿತ್ತು. ಈಗ ಮತ್ತದೇ ಕೃತ್ಯ ಪುನರಾವರ್ತನೆಯಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 

ಮುಂಬೈನ ಪೂರ್ವ ಉಪನಗರದಲ್ಲಿ ಆಯೋಜಿಸಿದ್ದ ಧಾರ್ಮಿಕ ಸಮಾರಂಭವೊಂದರ ಹೊರಗೆ ಈ 68 ವರ್ಷದ  ಮಹಿಳೆ ಸರಕುಗಳನ್ನು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದರು. ಈ ಧಾರ್ಮಿಕ ಸಮಾರಂಭಕ್ಕೆ ಆರೋಪಿಯೂ ಹೋಗಿದ್ದು, ಈ ವೇಳೆ ಮಹಿಳೆಯ ಜೊತೆ ಚೆನ್ನಾಗಿಯೇ ಮಾತನಾಡಿ ನಂಬಿಕೆ ಕುದುರಿಸಿದ ಆರೋಪಿ ಆಕೆಯನ್ನು ಮನೆಗೆ ಡ್ರಾಪ್ ಮಾಡುವುದಾಗಿ ಮಲವೊಲಿಸಿದ್ದ. ಹೀಗೆ ಆಕೆಯನ್ನು ಮನೆಗೆ ತಲುಪಿಸುವ ದಾರಿ ಮಧ್ಯೆ ಅವರು ರಾತ್ರಿಯ ಊಟಕ್ಕೆ ಆಹಾರವನ್ನು ಕೂಡ ಪ್ಯಾಕ್ ಮಾಡಿ ತೆಗೆದುಕೊಂಡು ಹೋಗಿದ್ದರು. 

ಗಂಡ ಮಾಡಿದರೂ ಅತ್ಯಾಚಾರ ಅನ್ನೋದು ಅತ್ಯಾಚಾರವೇ; ಗುಜರಾತ್‌ ಹೈಕೋರ್ಟ್‌ ತೀರ್ಪು

ನಂತರ ಆಕೆಯ ಮನೆ ತಲುಪಿ ಊಟ ಮಾಡಿದ ನಂತರ ಆರೋಪಿ ಆಕೆಯನ್ನು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೇಳಿದ್ದಾನೆ. ಆದರೆ ಮಹಿಳೆ ನಿರಾಕರಿಸಿದ್ದಾಳೆ. ಅಲ್ಲದೇ ಆಕೆ ಪ್ರತಿರೋಧ ಒಡ್ಡಿದಾಗ ಆಕೆಗೆ ಥಳಿಸಲು ಆರಂಭಿಸಿದ್ದಾನೆ.  ಅಲ್ಲದೇ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಆ ಸ್ಥಳದಿಂದ ಆತ ಪರಾರಿಯಾಗಿದ್ದಾನೆ. ಘಟನೆಯಿಂದ ಆಘಾತಕ್ಕೊಳಗಾಗಿ ಕುಸಿದು ಬಿದ್ದ ಮಹಿಳೆಯನ್ನು ನಂತರ ಸ್ಥಳೀಯರು ಗಮನಿಸಿ ವಿಚಾರಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಆಕೆಯ ಕುಟುಂಬದವರಿಗೂ ಮಾಹಿತಿ ನೀಡಿದ್ದಾರೆ.

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ; ತಡೆಯಲು ಹೋದ ಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾದ ಕಾಮುಕ!

ನಂತರ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ.  ನಂತರ  ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಸ್ವಲ್ಪ ಹೊತ್ತಿನಲ್ಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದೇ ಆರೋಪಿಗೆ 2017ರಲ್ಲೂ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ನಂತರ ಆತನನ್ನು ಕಸ್ಟಡಿಗೆ ಪಡೆದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?