
ಬೆಂಗಳೂರು (ಮಾ.20) : ಮದ್ಯದ ದಾಸನಾಗಿದ್ದ ಸಾಫ್‌್ಟವೇರ್ ಎಂಜಿನಿಯರ್ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಪತ್ನಿ ಹಾಗೂ ಪುತ್ರನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿ ಹತ್ಯೆಗೆ ಯತ್ನಿಸಿ ಬಳಿಕ ತಾನೂ ಸಹ ಕುತ್ತಿಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರ(Rajarajeshwarinagar)ದ ಹರ್ಷ (45), ಸುಧಾರಾಣಿ (38), ಪ್ರಥಮ್ (12) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಂಜಾ ಮದ್ಯ ಸೇವಿಸಿ ತರಗತಿಗೆ ನುಗ್ಗಿ ದುರ್ವರ್ತನೆ: ದೂರು ನೀಡಿದರೂ ಶಿಕ್ಷಕರಿಗೆ ಸಿಗುತ್ತಿಲ್ಲ ಪೊಲೀಸ್ ನೆರವು!
ತುಮಕೂರು ಮೂಲದ ಹರ್ಷ ಹಾಗೂ ಬಳ್ಳಾರಿ ಮೂಲದ ಸುಧಾರಾಣಿ(Sudharani) ವೃತ್ತಿಯಲ್ಲಿ ಸಾಫ್‌್ಟವೇರ್ ಎಂಜಿನಿಯರ್(Softwear engineer)ಗಳಾಗಿದ್ದು, 12 ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ 12 ವರ್ಷದ ಪುತ್ರ ಇದ್ದಾನೆ. ಕಳೆದ 10 ವರ್ಷಗಳಿಂದ ರಾಜರಾಜೇಶ್ವರಿ ನಗರದಲ್ಲಿ ದಂಪತಿ ನೆಲೆಸಿದ್ದರು. ಇತ್ತೀಚೆಗೆ ಕುಡಿತದ ಚಟಕ್ಕೆ ಬಿದ್ದಿದ್ದ ಹರ್ಷ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜತೆಗೆ ಜಗಳ ಮಾಡುತ್ತಿದ್ದ. ಮೂರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ ಹರ್ಷ, ಮದ್ಯಪಾನ ಮಾಡಿಕೊಂಡು ಮನೆಯಲ್ಲೇ ಇರುತ್ತಿದ್ದ. ಈ ಬಗ್ಗೆ ಪತ್ನಿ ಪ್ರಶ್ನೆ ಮಾಡಿದರೆ ಜಗಳ ತೆಗೆದು ಆಕೆಯ ಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದ ಹರ್ಷ, ಸುಖಾಸುಮ್ಮನೆ ಪತ್ನಿಯ ಜತೆಗೆ ಜಗಳ ತೆಗೆದು ಹಲ್ಲೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿದಾಗ ಚಾಕು ತೆಗೆದು ಪತ್ನಿಯ ಕುತ್ತಿಗೆ ಚುಚ್ಚಿದ್ದಾನೆ. ಈ ಜಗಳವನ್ನು ನೋಡುತ್ತಾ ಅಳುತ್ತಿದ್ದ ಪುತ್ರನ ಕುತ್ತಿಗೆಗೂ ಚಾಕುವಿನಿಂದ ಚುಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ತನ್ನ ಕುತ್ತಿಗೆಗೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಸಂಬಂಧಿಕರು ಹಾಗೂ ಸ್ಥಳೀಯರು ಮೂವರನ್ನು ಆಸ್ಪತ್ರಗೆ ಕರೆದೊಯ್ದಿದ್ದಾರೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಗಮ್ಮತ್ತು..ಫುಲ್ ಟೈಟ್ ಆಗಿ ತನ್ನದೇ ಮದ್ವೆಗೆ ಬರಲು ಮರೆತ ವರ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ