ಇದೆಂಥಾ ಪೈಶಾಚಿಕ ಕೃತ್ಯ, ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ!

Published : Mar 19, 2023, 09:12 AM ISTUpdated : Mar 19, 2023, 09:13 AM IST
ಇದೆಂಥಾ ಪೈಶಾಚಿಕ ಕೃತ್ಯ,  ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ!

ಸಾರಾಂಶ

: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್‌ ಆಸ್ಪತ್ರೆ(GIMS Hospital Kalaburagi )ಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲೇ ಅತ್ಯಾಚಾರ(Rape) ಎಸಗಿದ ಹೇಯ ಘಟನೆ ಶುಕ್ರವಾರ ರಾತ್ರಿ ನಡೆದಿದೆ. 

ಕಲಬುರಗಿ (ಮಾ.19) : ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್‌ ಆಸ್ಪತ್ರೆ(GIMS Hospital Kalaburagi )ಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲೇ ಅತ್ಯಾಚಾರ(Rape) ಎಸಗಿದ ಹೇಯ ಘಟನೆ ಶುಕ್ರವಾರ ರಾತ್ರಿ ನಡೆದಿದೆ. 

ನಗರದ ಇಸ್ಲಾಮಾಬಾದ್‌ ಕಾಲೊನಿ(Islamabad Colony)ಯ ಮೆಹಬೂಬ್‌ ಪಾಷಾ(Mehboob Pasha) ತಂದೆ ಮದರಸಾಬ್‌ (40) ಅತ್ಯಾಚಾರ ಎಸಗಿದ ಆರೋಪಿ ಎಂದು ಹೇಳಲಾಗಿದ್ದು, ಈತನನ್ನು ಬ್ರಹ್ಮಪುರ ಪೊಲೀಸರು(Brahmapur police) ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ಮೊಮ್ಮಗಳನ್ನೇ ರೇಪ್ ಮಾಡಿದ ಅಜ್ಜ, 10 ರೂ. ಕೊಟ್ಟು ಬಾಯಿ ಮುಚ್ಚಲು ಹೇಳಿದ!

36 ವರ್ಷದ ಮಹಿಳೆಯೊಬ್ಬರು ಆರು ತಿಂಗಳಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಮಹಿಳೆ ಬೆಡ್ ಮೇಲೆ ಮಲಗಿದ್ದ ವೇಳೆ ಆರೋಪಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯ ಗಮನಿಸಿ ಕಾಮುಕನನ್ನು ಹಿಡಿದ ಬೇರೊಬ್ಬ ರೋಗಿಯ ವಾರಸುದಾರರು. ಈ ವೇಳೆ ಕೃತ್ಯವನ್ನು ಆಸ್ಪತ್ರೆಯಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ಸ್ಟಾಫ್ ನರ್ಸ ನೀಡಿದ ದೂರಿನ ಆಧಾರದ ಮೇಲೆ ವಿಕೃತ ಕಾಮುಕನ ಬಂಧನ

ಅಷ್ಟಕ್ಕೂ ಈತ ಯಾರು? ಆಸ್ಪತ್ರೆಗೆ ಬಂದಿದ್ದೇಕೆ ಎಂಬುದೇ ನಿಗೂಢವಾಗಿದೆ. ಈ ಘಟನೆಯಿಂದ ಜಿಮ್ಸ್ ಆಸ್ಪತ್ರೆ ಮಹಿಳಾ ಸಿಬ್ಬಂದಿ, ರೋಗಿಗಳು ಬೆಚ್ಚಿಬಿದ್ದಿದ್ದಾರೆ.

ಹಿಂದೆಯೂ ನಡೆದಿತ್ತು: ಈ ಹಿಂದೆ ಕೋವಿಡ್‌ ಸಾಂಕ್ರಾಮಿಕ(Corona virus)ದ ಸಂದರ್ಭದಲ್ಲೂ ಜಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಯುವಕನೊಬ್ಬ ಅತ್ಯಾಚಾರ ವೆಸಗಿದ ಘಟನೆ ನಡೆದಿತ್ತು. ಘಟನೆ ಖಂಡಿಸಿ ಮತ್ತು ಆರೋಪಿಯನ್ನು ಬಂಧಿಸಲು ಆಗ್ರಹಿಸಿ ಮಹಿಳಾಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 

5 ವರ್ಷದ ನಿರಂತರ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್

ಮೇಲಿಂದ ಮೇಲೆ ಈ ರೀತಿಯ ಘಟನೆಗಳು ನಡೆಯುತ್ತಿರುವುದರಿಂದ ಜಿಮ್ಸ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸುರಕ್ಷತೆ ಇಲ್ಲ ಎನ್ನುವಂತಾಗಿದ್ದು, ಇಂಥ ಘಟನೆಗಳು ಮರುಕಳಿಸದಂತೆ ಆಸ್ಪತ್ರೆ ಆಡಳಿತ ಮಂಡಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜನ ಆಗ್ರಹಿಸುತ್ತಿದ್ದಾರೆ. ಸದ್ಯ ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ