
ಬೆಂಗಳೂರು(ನ.04): ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದ ಗುತ್ತಿಗೆದಾರನಿಗೆ ‘ನಾವು ಪಾಕಿಸ್ತಾನದವರು’ ಎಂದು ಕೂಗಾಡಿದ ಗುಂಪೊಂದು ಹಲ್ಲೆ ನಡೆಸಿರುವ ಪರಾರಿಯಾಗಿರುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಇಎಂಎಲ್ ಲೇಔಟ್ ನಿವಾಸಿ ತಿಲಕ್ ಹಲ್ಲೆಗೊಳಗಾದವರು. ಇವರು ಕೊಟ್ಟ ದೂರಿನ ಮೇರೆಗೆ ಅಕ್ಷತ್ ಜೈನ್, ಜೆ.ಕೊಠಾರಿ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಿಲಕ್ ಹಾಗೂ ಆತನ ಸ್ನೇಹಿತರು, ಅ.31ರಂದು ಕೋರಮಂಗಲದ ಪಬ್‌ವೊಂದರಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು. ಇದೇ ವೇಳೆ ಅಲ್ಲಿಗೆ ಹೋಗಿದ್ದ ಅಕ್ಷತ್ ಜೈನ್, ಕೊಠಾರಿ ಮತ್ತು ಆತನ ಸ್ನೇಹಿತರು ಗುರಾಯಿಸಿ, ಅವಾಚ್ಯವಾಗಿ ನಿಂದಿಸಿದ್ದರು. ನೀವು ಬೆಂಗಳೂರಿನವರಾ ಎಂದು ತಿಲಕ್ ಕೇಳಿದ್ದರು. ನಾವು ಪಾಕಿಸ್ತಾನದವರು ಎಂದು ಹೇಳಿ ಕೂಗಾಡಿದ್ದ ಆರೋಪಿಗಳು, ಅಲ್ಲಿಂದ ಹೊರಟು ಹೋಗಿದ್ದರು.
ಮನೆ ಬಾಡಿಗೆ ಕೇಳಿದ ಮಾಲೀಕರ ಮೇಲೆ ಮಹಿಳೆಯಿಂದ ಹಲ್ಲೆ
ಕೆಲ ಸಮಯದ ನಂತರ ಪಬ್‌ನ ಕೊಠಡಿಯೊಂದರಲ್ಲಿ ತಿಲಕ್ ಸಿಗರೇಟ್ ಸೇದುತ್ತಿದ್ದರು. ಅಲ್ಲಿಗೆ ಹೋಗಿದ್ದ ಆರೋಪಿಗಳು, ಜಗಳ ತೆಗೆದು ಹಲ್ಲೆ ಮಾಡಿದ್ದಾರೆ. ಟೀ ಶರ್ಟ್ ಹಿಡಿದು ಎಳೆದಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ತಿಲಕ್ ದೂರು ಕೊಟ್ಟಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ