ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದ ಮನೆಗೆ ಬೆಂಕಿಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ (ಜ.5): ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದ ಮನೆಗೆ ಬೆಂಕಿಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ.
ಚಂದ್ರಕಾಂತ್ ಛಲವಾದಿ ಎಂಬುವವರ ಮನೆ ಬೆಂಕಿಗೆ ಆಹುತಿ. ಮನೆಗೆ ತಾಗುವಂತಿರುವ ವಿದ್ಯುತ್ ಸರ್ವಿಸ್ ತಂತಿಗಳು. ಜೋರು ಗಾಳಿಗೆ ತೂಗಾಡಿರುವ ತಂತಿಗಳು. ಈ ವೇಳೆ ಮನೆಯ ಮೇಲ್ಛಾವಣಿಗೆ ತಗುಲಿ ಕಿಡಿ ಹೊತ್ತಿ ಬೆಂಕಿ. ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಮನೆ. ವಿದ್ಯುತ್ ತಂತಿಯಿಂದ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯಿಂದ ಹೊರಗೆ ಓಡಿಬಂದ ಕುಟುಂಬ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೋರ್‌ವೆಲ್ ಆನ್ ಮಾಡುವಾಗ ಕರೆಂಟ್ ಶಾಕ್: ಅಜ್ಜ, ಅಜ್ಜಿ, ಮೊಮ್ಮಗಳು ಸಾವು
ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಸುಮಾರು 10 ಲಕ್ಷ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ಹೆಸ್ಕಾಂ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು. ಮನೆಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳು. ಮನೆಮೇಲೆ ಮಳೆಗಾಳಿಗೆ ಮನೆ ತಾಗುವ ವಿದ್ಯುತ್ ತಂತಿಗಳಿಂದ ಯಾವಾಗ ಯಾವ ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತದೋ ಎಂಬ ಭಯದಲ್ಲಿರುವ ಗ್ರಾಮಸ್ಥರು.
ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ: ಕರೆಂಟ್ ಶಾಕ್‌ಗೆ ಇಬ್ಬರು ಪ್ರಜ್ಞಾಹೀನ