ಮೈಸೂರು: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮಿ

By Suvarna News  |  First Published Feb 16, 2021, 9:01 PM IST

ಮೈಸೂರಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಹೆಣ್ಣು ಬೀದಿ ನಾಯಿ ಮೇಲೆ ಯುವಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 


ಮೈಸೂರು, (ಫೆ.16): ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿ, ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನ್ನು ಮೈಸೂರಿನ ವಿ.ವಿ.ಪುರಂ ಪೊಲೀಸರು ಬಂಧಿಸಿದ್ದಾರೆ.

ನಗರದ ಗೋಕುಲಂನ 2ನೇ ಹಂತದ ಎಂಸಿಸಿ ಕಾಲೊನಿಯ ಯುವಕ ಸೋಮಶೇಖರ್‌ ಬಂಧಿತ ಆರೋಪಿ. ಗೋಕುಲಂನ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ಆರೋಪಿ ಸೋಮಶೇಖರ್‌ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪೈಶಾಚಿಕ ಕೃತ್ಯವನ್ನು ದಾರಿಹೋಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. 

Tap to resize

Latest Videos

ವಿಚಿತ್ರ ಭಂಗಿಯಲ್ಲಿ ವೈದ್ಯ ಗಂಡನಿಂದ ನಿಸರ್ಗಕ್ಕೆ ವಿರೋಧ ಸೆಕ್ಸ್, ಪತ್ನಿ ಸುಸೈಡ್!

ಈ ದುಷ್ಕೃತ್ಯದ ವಿಡಿಯೊ ವೈರಲ್‌ ಆಗಿತ್ತು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ.ಬಿ. ಹರೀಶ್ ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ ಪೊಲೀಸರು, ಬಂಧಿಸಿದ್ದು, ದುಷ್ಕೃತ್ಯ ಎಸಗಿರುವ ಸೋಮಶೇಖರ್‌ ವಿರುದ್ಧ ಐಪಿಸಿ ಸೆಕ್ಷನ್ 1860 (ಯು/ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು), ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 (ಯು/ಎಸ್-11(1)(ಎ)) ಅಡಿಯಲ್ಲಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ಮಂಗಳವಾರ ಮೈಸೂರಿನ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸ್ಪೆಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

click me!